ಮನೆ ಆರೋಗ್ಯ ರಾಜ್ಯದಲ್ಲಿ ಮಳೆ, ಶೀತ ಗಾಳಿ: ಸಾರ್ವಜನಿಕರು, ವೃದ್ಧರು, ಮಕ್ಕಳು, ಗರ್ಭಿಣಿಯರಿಗೆ ಆರೋಗ್ಯ ಇಲಾಖೆ ಸಲಹೆ

ರಾಜ್ಯದಲ್ಲಿ ಮಳೆ, ಶೀತ ಗಾಳಿ: ಸಾರ್ವಜನಿಕರು, ವೃದ್ಧರು, ಮಕ್ಕಳು, ಗರ್ಭಿಣಿಯರಿಗೆ ಆರೋಗ್ಯ ಇಲಾಖೆ ಸಲಹೆ

0

ಮಾಂಡೋಸ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಪ್ರಮಾಣದಲ್ಲಿ ಮಳೆ, ಶೀತ ಗಾಳಿ ಹಾಗೂ ಅತಿ ಕಡಿಮೆ ತಾಪಮಾನವು ವರದಿಯಾಗಿದ್ದು, ಈ ಪರಿಸ್ಥಿತಿಯು ಇನ್ನೂ ಅನೇಕ ದಿನಗಳು ಮುಂದುವರೆಯುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು, ಮಕ್ಕಳು ( ನವಜಾತ ಶಿಶುಗಳು ಸೇರಿದಂತೆ),ಗರ್ಭಿಣಿಯರು, ವೃದ್ಧರು, ವಿಶೇಷವಾಗಿ ಇತರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು
ಆರೋಗ್ಯ ಕಾಪಾಡಿಕೊಳ್ಳಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ಅನೇಕ ಸಲಹೆಗಳನ್ನು ನೀಡಿದೆ.

ಆರೋಗ್ಯ ಕಾಪಾಡಿಕೊಳ್ಳಲು  ಏನು ಮಾಡಬೇಕು ?

ಯಾವಾಗಲೂ ಬೆಚ್ಚಗಿನ ನೀರು / ಸೂಪ್‌ಗಳನ್ನು ಕುಡಿಯುವುದು., ಸುಲಭವಾಗಿ ಜೀರ್ಣವಾಗುವ ಹಾಗೂ ಆಗತಾನೆ ತಯಾರಿಸಿದ ಆಹಾರ ಪದಾರ್ಥಗಳನ್ನು ಸೇವಿಸುವುದು. ಯಾವಾಗಲೂ ಸೈಟರ್- ಸಾಕ್ಸ್ ಹಾಗೂ ಕೈಗವಸುಗಳನ್ನು ಧರಿಸುವುದು ಹಾಗೂ ಮನೆಯ ಒಳಗಿರುವಾಗಲೂ ಬೆಚ್ಚಗಿರುವುದು ಉತ್ತಮ.

ಸ್ನಾನಕ್ಕೆ ಬಿಸಿ ನೀರು / ಬೆಚ್ಚಗಿನ ನೀರನ್ನು ಉಪಯೋಗಿಸುವುದು. ಅನಗತ್ಯವಾಗಿ ಹೊರ ಸಂಚಾರವನ್ನು ತಪ್ಪಿಸಿ. ಕಿವಿಗಳನ್ನು ಹತ್ತಿಯಿಂದ ಮುಚ್ಚಿಕೊಳ್ಳಿ ಅಥವಾ ಸ್ಕಾರ್ಫ್ ಕಟ್ಟಿಕೊಳ್ಳಿ ಹಾಗೂ ಹೊರಗೆ ಹೋಗಲೇಬೇಕಾದಲ್ಲಿ ಮಾಸ್ಕ್ ಧರಿಸಬೇಕು. ನೆಗಡಿ, ಕೆಮ್ಮು ಹಾಗೂ ಜ್ವರದ ಲಕ್ಷಣಗಳಿರುವರಿಂದ ದೂರವಿರಬೇಕು. ಮೊಣಕೈ ಒಳಗೆ ಸೀನುವುದು / ಕೆಮ್ಮುವುದು. ಅಥವಾ ಸೀನುವಾಗ / ಕೆಮ್ಮುವಾಗ ಶೂ ಅಥವಾ ಕರವಸ್ತ್ರವನ್ನು ಬಳಸುವುದು. ಕೈಗಳನ್ನು ಆಗಾಗ್ಗೆ ನೀರು ಹಾಗೂ ಸೋಪಿನಿಂದ ತೊಳೆಯುವುದು.

ಜ್ವರ /ಫ್ಲ್ಯೂನ ಲಕ್ಷಣಗಳು ಅಥವಾ ಇತರೆ ಯಾವುದಾದರೂ ಖಾಯಿಲೆಯ ಲಕ್ಷಣಗಳಿದ್ದಲ್ಲಿ ತಕ್ಷಣವೇ ವೈದ್ಯರ ಸಲಹೆಯನ್ನು ಪಡೆಯುವುದು. ಸ್ವಯಂವೈದ್ಯ ಪದ್ಧತಿಗಳನ್ನು ಅನುಸರಿಸಬಾರದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಏನು ಮಾಡಬಾರದು ?

ತಣ್ಣಗಿನ ಪಾನೀಯಗಳು , ಐಸ್ ಕ್ರೀಂಗಳನ್ನು ಸೇವಿಸಬಾರದು. ರೆಫ್ರಿಜರೇಟರ್‌’ನ ಅಥವಾ ತಣ್ಣಗಿನ ನೀರನ್ನು ಕುಡಿಯಬಾರದು. ಮಳೆಯಲ್ಲಿ ನೆನೆಯುವುದನ್ನು ಹಾಗೂ ತಣ್ಣನೆಯ ಶೀತ ಗಾಳಿಗೆ ಮೈ ಒಡ್ಡುವುದನ್ನು ತಪ್ಪಿಸಬೇಕು. ಹೊರಾಂಗಣ ಪ್ರವಾಸಗಳನ್ನು ಆದಷ್ಟು ನಿರ್ಭಂಧಿಸಿ. ಮಸಾಲಾಯುಕ್ತ ಪದಾರ್ಥಗಳು / ಜಂಕ್ ಫುಡ್‌’ಗಳನ್ನು ವರ್ಜಿಸಬೇಕು ಎಂದು ಸೂಚಿಸಲಾಗಿದೆ.

ಹಿಂದಿನ ಲೇಖನಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣ: ಮೂವರು ಕಾರ್ಮಿಕರು ಸಾವು
ಮುಂದಿನ ಲೇಖನ‘ಮೋದಿ ಹತ್ಯೆ ಮಾಡಿ’ ಎಂದಿದ್ದ ಕಾಂಗ್ರೆಸ್ ನಾಯಕ ಪಟೇರಿಯಾ ಬಂಧನ