ಮನೆ ರಾಜ್ಯ ರಾಜ್ಯದಲ್ಲಿ ಮಳೆ, ಪ್ರವಾಹದಿಂದ ಹಾನಿ: ವಿಧಾನಸಭೆಯಲ್ಲಿಂದು ಚರ್ಚೆ

ರಾಜ್ಯದಲ್ಲಿ ಮಳೆ, ಪ್ರವಾಹದಿಂದ ಹಾನಿ: ವಿಧಾನಸಭೆಯಲ್ಲಿಂದು ಚರ್ಚೆ

0

ಬೆಂಗಳೂರು(Bengaluru): ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜುಲೈನಿಂದ ಸುರಿದ ಭಾರಿ ಮಳೆ, ಪ್ರವಾಹ, ಭೂಕುಸಿತ ಸೇರಿದಂತೆ ಬೆಂಗಳೂರು ನಗರದಲ್ಲಿ ಉಂಟಾದ ಪ್ರವಾಹದ ಬಗ್ಗೆ ಇಂದಿನಿಂದ ಮೂರು ದಿನಗಳ ಕಾಲ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಕಲಾಪ ಸಲಹಾ ಸಮಿತಿ ಸಭೆ ತೀರ್ಮಾನಿಸಿದೆ.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್‌ ನಾಯಕ ವೆಂಕಟರಾವ್‌ ನಾಡಗೌಡ, ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಭಾಗವಹಿಸಿದ್ದರು.

ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಮಂಗಳವಾರ ನಿಯಮ 69 ಅಡಿ ವಿಷಯವನ್ನು ಪ್ರಸ್ತಾಪಿಸಲಿದೆ. ಆದರೆ, ಬೇರೆ ನಿಯಮದಡಿ ಚರ್ಚೆ ನಡೆಸಲು ಸರ್ಕಾರ ಒಪ್ಪಿಗೆ ನೀಡಲಿದೆ ಎಂದು ಮೂಲಗಳು ತಿಳಿಸಿವೆ.

ಮಳೆ ಮತ್ತು ಪ್ರವಾಹದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೂರಾರು ಜನ ಮೃತಪಟ್ಟಿದ್ದಾರೆ. ಆದ್ಯತೆಯ ಮೇರೆಗೆ ಈ ವಿಷಯವನ್ನು ಚರ್ಚೆಗೆ ತೆಗೆದುಕೊಳ್ಳಬೇಕು  ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.