ಮನೆ ರಾಜ್ಯ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯ ಮುನ್ಸೂಚನೆ!

ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯ ಮುನ್ಸೂಚನೆ!

0

ಬೆಂಗಳೂರು : ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನವಿಡೀ ಮೋಡ ಮುಸುಕಿದ ವಾತಾವರಣವಿದ್ದು, ಕೆಲವೆಡೆ ಆಕಸ್ಮಿಕವಾಗಿ ಮಳೆ ಸುರಿಯುವ ಸಾಧ್ಯತೆ ಇದೆ.

ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಇಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್‌ನಲ್ಲಿರಲಿದೆ.

ಮಳೆ ಬೀಳುವ ಸಾಧ್ಯತೆ ಇರುವ ಪ್ರಮುಖ ಜಿಲ್ಲೆಗಳು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ಕಲಬುರಗಿ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಈ ಎಲ್ಲಾ ಜಿಲ್ಲೆಗಳಲ್ಲಿ ಹಗಲು ಅಥವಾ ಸಂಜೆ ವೇಳೆ ಸಾಧಾರಣದಿಂದ ಹಿಡಿದು ಮಿತ ಪ್ರಮಾಣದ ಮಳೆಯಾಗುವ ಸಾಧ್ಯತೆವಿದೆ. ಕೆಲವು ಕಡೆಗಳಲ್ಲಿ ಸಹಜವಾಗಿ ಮಿಂಚು ಮತ್ತು ಗುಡುಗು ಸಹಿತ ಮಳೆಯಾಗಬಹುದೆಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.