ಮನೆ ಹವಮಾನ ಕರ್ನಾಟಕದ 21 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆ

ಕರ್ನಾಟಕದ 21 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆ

0

ಬೆಂಗಳೂರು ಸೇರಿ ಕರ್ನಾಟಕದ 21 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Join Our Whatsapp Group

ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತ್ರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

ಗುರುವಾರ ಸಂಜೆಯಿಂದಲೇ ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆಯಾಗಿದೆ. ಶಿರಾಲಿಯಲ್ಲಿ 16.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಶುಕ್ರವಾರ ಬೆಳಗ್ಗೆಯಿಂದಲೇ ಮಳೆ ಜಿನುಗುತ್ತಿದೆ.

ಎಚ್​ಎಎಲ್​ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬಂಗಾಳಕೊಲ್ಲಿ ಭಾಗದಲ್ಲಿ ನಿರ್ಮಾಣವಾಗಿದ್ದ ಹವಾಮಾನ ವೈಪರಿತ್ಯವು ಕರಾವಳಿಯತ್ತ ಬಂದಿದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿದ್ದ ವಾಯುಭಾರ ಕುಸಿತವು ಚಂಡಮಾರುತ ಪರಿಚಲನೆಯಾಗಿ ಬದಲಾಗಿದೆ. ದಕ್ಷಿಣ ಆಂಧ್ರಪ್ರದೇಶ ಮತ್ತು ಉತ್ತರ ತಮಿಳುನಾಡು ಕರಾವಳಿಯ ನೈಋತ್ಯ ಭಾಗದತ್ತ ಬಿರುಗಾಳಿ ಬೀಸುತ್ತಿದೆ.