ಮನೆ ಹವಮಾನ ಜೂನ್​ 22ರ ವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ

ಜೂನ್​ 22ರ ವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ

0

ಕರ್ನಾಟಕದಲ್ಲಿ ಮುಂಗಾರು ಅಬ್ಬರ ಕೊಂಚ ಕಡಿಮೆಯಾಗಿತ್ತು, ಇದೀಗ ಮತ್ತೆ ಮೋಡಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಮಳೆ ಚುರುಕಾಗುವ ಸಾಧ್ಯತೆ ಹೆಚ್ಚಿದೆ.

Join Our Whatsapp Group

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕುಮಟಾ, ಗೇರುಸೊಪ್ಪ, ಗೋಕರ್ಣ, ಅಂಕೋಲಾ, ಗದಗ, ಮಂಕಿ, ಹಳಿಯಾಳ, ಶಿರಾಲಿ, ಸಂಕೇಶ್ವರ, ಕುಶಾಲನಗರ, ಕಾರವಾರ, ಹೊನ್ನಾವರ, ನಿಪ್ಪಾಣಿ, ಯಲ್ಲಾಪುರ, ಮುಂಡಗೋಡು, ಚಿಕ್ಕೋಡಿ, ಹಿಡಕಲ್ ಅಣೆಕಟ್ಟು, ಬೆಳಗಾವಿ ವಿಮಾನ ನಿಲ್ದಾಣ, ಭಾಗಮಂಡಲ ಕಿರವತ್ತಿ, ಕದ್ರಾ, ಲೋಂಡಾ, ಹಾವೇರಿ, ಬೆಳ್ತಂಗಡಿ, ಔರಾದ್, ಚಿಂತಾಮಣಿ, ರಾಯಲ್ಪಾಡು, ಹಾರಂಗಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.