ಮನೆ ಹವಮಾನ ರಾಜ್ಯದಲ್ಲಿ ಏಪ್ರಿಲ್ 18ರಿಂದ ಐದು ದಿನಗಳ ಕಾಲ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಏಪ್ರಿಲ್ 18ರಿಂದ ಐದು ದಿನಗಳ ಕಾಲ ಮಳೆ: ಹವಾಮಾನ ಇಲಾಖೆ

0

ಬೆಂಗಳೂರು: ಈ ಬಾರಿ ಮುಂಗಾರು ಕೂಡ ವಾಡಿಕೆಗಿಂತ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Join Our Whatsapp Group

ಹಾಗೆಯೇ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಏಪ್ರಿಲ್ 18ರಿಂದ ಮಳೆಯಾಗಲಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಏಪ್ರಿಲ್ 18ರಿಂದ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ,ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

ಹಾಗೆಯೇ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲೂ ಮಳೆಯಾಗಲಿದೆ.

ಕಲಬುರಗಿ ಹಾಗೂ ರಾಯಚೂರಿನಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಎಚ್​ಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ , 26.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್ ​ನಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 39.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 37.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.