ಬೆಂಗಳೂರು(Bengaluru): ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ ಮೂರು ದಿನ ಭಾರಿ ಮಳೆ ಯಾಗುವ ಸಾಧ್ಯತೆಯಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ ನ. 6ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ನವೆಂಬರ್ 6 ರವರೆಗೆ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಶಿವಮೊಗ್ಗ, ಕೋಲಾರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.