ಬೆಂಗಳೂರು (Bengaluru): ರಾಜ್ಯದ ವಿವಿಧೆಡೆ ಜೂ.14 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮೂರು ದಿನ ಮಳೆ ಮುಂದುವರೆಯಲಿದೆ. ನೈಋತ್ಯ ಮುಂಗಾರು ಪ್ರಭಾವದಿಂದ ಇನ್ನೂ ತುಂತುರು ಮಳೆಯಾಗುತ್ತಿದೆ.
ಜೂನ್ ಮೊದಲ ವಾರದಲ್ಲಿಯೇ ನೈಋತ್ಯ ಮುಂಗಾರು ಕರ್ನಾಟಕಕ್ಕೆ ಆಗಮಿಸಿದೆ. ಆದರೆ 10 ದಿನಗಳಿಂದ ಮುಂಗಾರು ದುರ್ಗಲವಾಗಿದ್ದು, ಮಳೆಯಾಗುತ್ತಿಲ್ಲ.
ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸೇರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.