ಮನೆ ರಾಷ್ಟ್ರೀಯ ಹಳೆಯ ಬಜೆಟ್ ಪ್ರತಿ ಓದಿ ನಗೆಪಾಟಲಿಗೀಡಾದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್

ಹಳೆಯ ಬಜೆಟ್ ಪ್ರತಿ ಓದಿ ನಗೆಪಾಟಲಿಗೀಡಾದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್

0

ರಾಜ್ಯಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ವಿಧಾನಸಭೆಯಲ್ಲಿ ತಮ್ಮ ಮೂರನೇ ಅವಧಿಯ ಕೊನೆಯ ಬಜೆಟ್​ ಅನ್ನು ಓದುವ ಬದಲು ಹಳೆಯ ಬಜೆಟ್​ ಓದಿ ನಗೆಪಾಟಲಿಗೀಡಾದರು.

ರಾಜ್ಯಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ತಮ್ಮ ಮೂರನೇ ಅವಧಿಯ ಕೊನೆಯ ಬಜೆಟ್​ ಅನ್ನು ಮಂಡಿಸಬೇಕಿತ್ತು, ಆದರೆ ವಿಧಾನಸಭೆಯಲ್ಲಿ ಹಳೆಯ ಬಜೆಟ್​ ಓದಿದರು. ತಕ್ಷಣವೇ ಸಚಿವ ಮಹೇಶ್ ಜೋಶಿ ಗೆಹ್ಲೋಟ್​ರನ್ನು ಮಧ್ಯದಲ್ಲೇ ತಡೆದರು, ಇದರಿಂದ ಸನದಲ್ಲಿ ಭಾರಿ ಕೋಲಾಹಲ ಉಂಟಾಯಿತು, ಕಲಾಪವನ್ನು ಮುಂದೂಡಲಾಯಿತು. ತಕ್ಷಣ ದಿನಾಂಕ ನೋಡಿದ ಸಿಎಂ ಶಾಕ್ ಆಗಿದ್ದಾರೆ, ನಂತರ ಅವರೇ ನಗಲು ಪ್ರಾರಂಭಿಸಿದ್ದಾರೆ.

ಬಜೆಟ್​ ಸೋರಿಕೆಯಾಗಿದೆ ಎಂದು ಈಗಾಗಲೇ ದಾಳಿ ನಡೆಸುತ್ತಿರುವ ಬಿಜೆಪಿ ಗದ್ದಲವನ್ನು ತೀವ್ರಗೊಳಿಸಿದರು. ಹಲವು ಬಾರಿ ಮನವಿ ಮಾಡಿದರೂ ಗದ್ದಲ ನಿಲ್ಲದ ಕಾರಣ ಕಲಾಪವನ್ನು ಅರ್ಧಗಂಟೆ ಮುಂದೂಡಲಾಯಿತು.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಬಜೆಟ್ ಅನ್ನು ನೇರಪ್ರಸಾರ ಮಾಡಲಾಗುತ್ತಿತ್ತು! ಹೀಗಾಗಿ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ತೀವ್ರ ಮುಜುಗರಕ್ಕೆ ಒಳಗಾಗಿದ್ದಾರೆ.