ಮನೆ ರಾಜ್ಯ ರಾಜಕುಮಾರ ಟಾಕಳೆ ನನ್ನ ಗಂಡ: ಸಾಮಾಜಿಕ ಕಾರ್ಯಕರ್ತೆ ನವ್ಯಾಶ್ರೀ

ರಾಜಕುಮಾರ ಟಾಕಳೆ ನನ್ನ ಗಂಡ: ಸಾಮಾಜಿಕ ಕಾರ್ಯಕರ್ತೆ ನವ್ಯಾಶ್ರೀ

0

ಬೆಳಗಾವಿ(Belagavi): ರಾಜಕುಮಾರ ಟಾಕಳೆ ನನ್ನ ಗಂಡ, ಅವನಿಂದ ನನಗೆ ಏನು ಮೋಸ ಆಗಿದೆ ಅನ್ನೋದನ್ನು ಮುಂದಿನ ದಿನಗಳಲ್ಲಿ ಹೇಳುತ್ತೇನೆ ಎಂದು ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ಹೇಳಿದರು.

ನವ್ಯಾಶ್ರೀ ಬೆದರಿಕೆ ಹಾಕುತ್ತಿದ್ದಾರೆ ಎಂದು ಅಧಿಕಾರಿ ರಾಜಕುಮಾರ ಟಾಕಳೆ ದೂರು ನೀಡಿದ್ರೆ, ಇತ್ತ ರಾಜಕುಮಾರ ಅವರೇ ನನ್ನ ಗಂಡ ಎಂದು ನವ್ಯಾಶ್ರೀ ಹೇಳುತ್ತಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ನಾನು ವಿದೇಶಿ ಪ್ರವಾಸದಲ್ಲಿದ್ದೆ.  ಸಾಮಾಜಿಕ ಜಾಲತಾಣದಲ್ಲಿ ನನ್ನ ಫೋಟೋ, ವಿಡಿಯೋ ವೈರಲ್ ಆಗಿರುವುದು ಗೊತ್ತಾಗಿದೆ. ಈ ಬಗ್ಗೆ ನಾನು ಬೆಳಗಾವಿ ಪೊಲೀಸ್ ಕಮಿಷನರ್ ಭೇಟಿಯಾಗಿ ದೂರು ಕೊಡುತ್ತೇನೆ ಎಂದರು.

ನನ್ನ ಮೇಲೆ ಎಫ್​ಐಆರ್ ದಾಖಲಾಗಿರುವ ಬಗ್ಗೆ ಮಾಹಿತಿಯಿಲ್ಲ. ಈವರೆಗೂ ಯಾವುದೇ ಪೊಲೀಸರು ನನಗೆ ಫೋನ್ ಮಾಡಿಲ್ಲ. ಎಫ್​ಐಆರ್ ಕಾಪಿ‌ ಪಡೆದು ಮಾತಾಡುತ್ತೇನೆ. ರಾಜಕುಮಾರ ಟಾಕಳೆ ನನ್ನ ಗಂಡ. ಅವನಿಂದ ನನಗೆ ಏನು ಮೋಸ ಆಗಿದೆ. ಅನ್ನೋದನ್ನ ಮುಂದಿನ ದಿನಗಳಲ್ಲಿ ಹೇಳುತ್ತೇನೆ. ನಾನು ಯಾವ ರೀತಿ ಮದುವೆ ಆಗಿದ್ದೇನೆ ಅನ್ನೋದನ್ನು ದಾಖಲೆ ಸಮೇತ ಬರುತ್ತೇನೆ ಎಂದು ನವ್ಯಾಶ್ರೀ ತಿಳಿಸಿದರು.

ಇದಕ್ಕೂ ಮುನ್ನ ಬೆಳಗಾವಿ ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ್ ಟಾಕಳೆ ಅವರು ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ನವ್ಯಾ ಶ್ರೀ ಆರ್‌.ರಾವ್ ಮತ್ತು ಅವರ ಸ್ನೇಹಿತನ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ. ಸುಲಿಗೆ, ಸುಳ್ಳು ಅತ್ಯಾಚಾರ ಆರೋಪ ಹಾಗೂ ಜೀವ ಬೆದರಿಕೆ ಹಾಕುತ್ತಿದ್ದಾರೆ. ಜೊತೆಗೆ ನನಗೆ ಮತ್ತು ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ರಾಜಕುಮಾರ ಟಾಕಳೆ ನೀಡಿದ ದೂರಿನಲ್ಲಿ ಉಲ್ಲೇಖವಿದೆ.

ಬೆಳಗಾವಿ ಎಪಿಎಂಸಿ ಪೊಲೀಸರು ನವ್ಯಾಶ್ರೀ ವಿರುದ್ಧ ಐಪಿಸಿ 1860(u/s.384, 448, 504, 506, 34) ಅಡಿ ಕೇಸ್ ದಾಖಲಿಸಿಕೊಂಡಿದ್ದಾರೆ.