ಮನೆ ರಾಜ್ಯ ರಾಜ್ಯಸಭಾ ಚುನಾವಣೆ: ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಅಡ್ಡ ಮತದಾನ

ರಾಜ್ಯಸಭಾ ಚುನಾವಣೆ: ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಅಡ್ಡ ಮತದಾನ

0

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆ.

ಸೋಮಶೇಖರ್ ಅಡ್ಡ ಮತ ಚಲಾಯಿಸಿದ್ದಾರೆ  ಎಂದು ಬಿಜೆಪಿಯ ಚುನಾವಣಾ ಏಜೆಂಟರೊಬ್ಬರು ಖಚಿತಪಡಿಸಿದರು.

ರಾಜ್ಯಸಭಾ ಚುನಾವಣೆಯಲ್ಲಿ ಆತ್ಮಸಾಕ್ಷಿಯ ಮತ ಹಾಕಿದ್ದೇನೆ ಎಂದು ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಹೇಳಿದರು.

ವಿಧಾನಸೌಧದಲ್ಲಿ ಮಂಗಳವಾರ ಮತ ಚಲಾಯಿಸಿದ ಬಳಿಕ‌ ಸುದ್ದಿಗಾರರ ಜತೆ ಮಾತನಾಡಿದ ಅವರು,  ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್ ಗೆ ತೋರಿಸಿದ್ದೇನೆ  ಎಂದರು.

ಸೋಮಶೇಖರ್ ಅವರು ಅಡ್ಡ ಮತದಾನದ ಕುರಿತು ಸ್ಪಷ್ಟವಾಗಿ ಏನನ್ನೂ ಹೇಳಲಿಲ್ಲ. ಆದರೆ, ಅವರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿರುವ ಸಾಧ್ಯತೆ ಇದೆ ಎಂಬ ಚರ್ಚೆ ಶಾಸಕರ ಮಧ್ಯೆ ನಡೆದಿದೆ.

ಮತ ಚಲಾಯಿಸುವ ಮೊದಲು ಮಾತನಾಡಿದ್ದ ಸೋಮಶೇಖರ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಮಾಡಲು ಪ್ರಯತ್ನಿಸಿದ್ದೆ‌. ಆದರೆ ಅವರು ಕಾಲಾವಕಾಶ ನೀಡಲಿಲ್ಲ ಎಂದು ದೂರಿದರು.

ಅಭಿವೃದ್ಧಿಗೆ ಯಾರು ಅನುದಾನ ಕೊಡುತ್ತಾರೋ ಅವರಿಗೆ ಮತ ಹಾಕುತ್ತೇನೆ  ಎಂದು ಹೇಳಿದ್ದರು.

ಹಿಂದಿನ ಲೇಖನಕಾಂಗ್ರೆಸ್ ​ಗೆ ಅಡ್ಡ ಮತದಾನದ ಭೀತಿ ಇದೆ ಅನ್ನೋದು ಸುಳ್ಳು: ಮಲ್ಲಿಕಾರ್ಜುನ ಖರ್ಗೆ
ಮುಂದಿನ ಲೇಖನಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ