ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಕುಪೇಂದ್ರ ರೆಡ್ಡಿ ಅವರನ್ನು 5ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆ ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿಯ ರಾಷ್ಟ್ರೀಯ, ರಾಜ್ಯ ನಾಯಕರ ಸಲಹೆ ಮೇರೆಗೆ ಎನ್ ಡಿಎ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ. ಬಿಜೆಪಿಯಲ್ಲಿ ಹೆಚ್ಚುವರಿ ಮತಗಳಿವೆ. ವಿಪಕ್ಷದ ಮತಗಳು ನಷ್ಟವಾಗಬಾರದು ಎಂದರು.
ಹೆಚ್ಚುವರಿ ವೋಟ್ ಕುಪೇಂದ್ರಗೆ ವರ್ಗಾವಣೆ ಮಾಡಬೇಕೆಂದು ತೀರ್ಮಾನಿಸಿದ್ದೇವೆ. ಈ ಕಾರಣಕ್ಕೆ ಈ ತೀರ್ಮಾನ ಮಾಡಲಾಗಿದೆ ಎಂದು ಅವರು ಹೇಳಿದರು.
Saval TV on YouTube