ಲಖನೌ(Lucknow): ಕಾಂಗ್ರೆಸ್ ತ್ಯಜಿಸಿರುವ ಕಪಿಲ್ ಸಿಬಲ್, ಸಮಾಜವಾದಿ ಪಕ್ಷದ (ಎಸ್ಪಿ) ಬೆಂಬಲದೊಂದಿಗೆ ಸ್ವತಂತ್ರ ಅಭ್ಯರ್ಥಿಯಾಗಿ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.
ಕಪಿಲ್ ಸಿಬಲ್ ಅವರು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಜತೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸಿಬಲ್, ಮೇ 16ರಂದೇ ಕಾಂಗ್ರೆಸ್ ಪಕ್ಷ ತ್ಯಜಿಸಿದ್ದೇನೆ. ರಾಜ್ಯಸಭೆಯಲ್ಲಿ ಸ್ವತಂತ್ರವಾಗಿ ಧ್ವನಿಯೆತ್ತಲು ಬಯಸುತ್ತೇನೆ’ ಎಂದು ಅವರು ಹೇಳಿದ್ದಾರೆ.