ಮನೆ ರಾಜಕೀಯ ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ

ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ

0

ಬೆಂಗಳೂರು(Bengaluru):  ರಾಜ್ಯ ಸಭಾ ಚುನಾವಣೆಗೆ ಬಿಜೆಪಿ ಪಕ್ಷದಿಂದ ಇಂದು ನಿರ್ಮಲ ಸೀತಾರಾಮನ್ ನಾಮಪತ್ರವನ್ನು ಸಲ್ಲಿಸಿದರು.

ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿಗೆ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಸಿದರು.  ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರುಗಳಾದ ಮಾಧುಸ್ವಾಮಿ, ಆರ್.ಅಶೋಕ್, ಮುನಿರತ್ನ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉಪಸ್ಥಿತರಿದ್ದರು.

ಇನ್ನು ಬಿಜೆಪಿಯಿಂದ 2ನೇ ಅಭ್ಯರ್ಥಿಯಾಗಿ ಜಗ್ಗೇಶ್ , 3ನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಸ್ಪರ್ಧಿಸುತ್ತಿದ್ದಾರೆ.

ಜೂನ್ 10 ರಂದು ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಹಿಂದಿನ ಲೇಖನನಾಡಗೀತೆಗೆ ಅವಮಾನಿಸಿರುವವರ ವಿರುದ್ಧ ಕ್ರಮ ಕೈಗೊಳ್ಳಿ: ಆದಿಚುಂಚನಗಿರಿ ಶ್ರೀ
ಮುಂದಿನ ಲೇಖನಹಿಂದೂ ಶಿಕ್ಷಕಿಯನ್ನು ಗುಂಡಿಕ್ಕಿ ಕೊಂದ ಭಯೋತ್ಪಾದಕರು