ಬೆಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದ್ದು, ಈ ಬಾರಿ 69 ಮಂದಿ ಸಾಧಕರಿಗೆ ಪ್ರಶಸ್ತಿ ಘೋಷಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಂಘ ಸಂಸ್ಥೆ ಸೇರಿ ವೈಯಕ್ತಿಕವಾಗಿ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ. ಇದರ ಜೊತೆ ವಿವಿಧ ಸಾಧನೆ ಮಾಡಿದ 50 ಪುರುಷರ ಹಾಗೂ 5೦ ಮಂದಿ ಮಹಿಳಾ ಸಾಧಕರಿಗೆ ಸುವರ್ಣ ಕರ್ನಾಟಕ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಸಾಹಿತ್ಯ ಕ್ಷೇತ್ರದಲ್ಲಿ ಬಿ.ಟಿ.ಲಲಿತಾ ನಾಯಕ್, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ ಹೆಸರು ಘೋಷಿಸಲಾಗಿದೆ.
ಜಾನಪದ ಕ್ಷೇತ್ರ
ಇಮಾಮಸಾಬ ಎಂ. ವಲ್ಲೆಪನವರ
ಅಶ್ವ ರಾಮಣ್ಣ
ಕುಮಾರಯ್ಯ
ವೀರಭದ್ರಯ್ಯ
ನರಸಿಂಹಲು (ಅಂಧ ಕಲಾವಿದ)
ಬಸವರಾಜ ಸಂಗಪ್ಪ ಹಾರಿವಾಳ
ಎಸ್.ಜಿ. ಲಕ್ಷ್ಮೀದೇವಮ್ಮ
ಪಿಚ್ಚಳ್ಳಿ ಶ್ರೀನಿವಾಸ
ಲೋಕಯ್ಯ ಶೇರ (ಭೂತಾರಾಧನೆ)
ಚಲನಚಿತ್ರ-ಕಿರುತೆರೆ
ಹೇಮಾ ಚೌಧರಿ
ಎಂಎಸ್ ನರಸಿಂಹಮೂರ್ತಿ
ಸಾಹಿತ್ಯ
ಬಿ.ಟಿ.ಲಲಿತಾ ನಾಯಕ್,
ಎಂ.ವೀರಪ್ಪ ಮೊಯಿಲಿ
ಆಡಳಿತ
ಎಸ್.ವಿ.ರಂಗನಾಥ್ (ಐಎಎಸ್)
ಶಿಲ್ಪಕಲೆ
ಅರುಣ್ ಯೋಗಿರಾಜ್
ಬಸವರಾಜ್ ಬಡಿಗೇರ
ಯಕ್ಷಗಾನ
ಕೇಶವ ಹೆಗಡೆ ಕೊಳಗಿ
ಸೀತಾರಾಮ ತೋಳ್ಪಾಡಿ