ಮನೆ ರಾಜ್ಯ ಕೋಡಿಹಳ್ಳಿ ಬೆಂಬಲಿಗರಿಂದ  ರಾಕೇಶ್ ಟಿಕಾಯಿತ್, ಯುದ್ವೀರ್ ಮುಖಕ್ಕೆ ಮಸಿ

ಕೋಡಿಹಳ್ಳಿ ಬೆಂಬಲಿಗರಿಂದ  ರಾಕೇಶ್ ಟಿಕಾಯಿತ್, ಯುದ್ವೀರ್ ಮುಖಕ್ಕೆ ಮಸಿ

0

ಬೆಂಗಳೂರು(Bengaluru): ರೈತ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ಯುಧ್ವೀರ್ ಸಿಂಗ್ ಮೇಲೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬೆಂಬಲಿಗರು ಮಸಿ ಎರಚಿದ್ದಾರೆ.

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿದ್ದ ರೈತ ಚಳವಳಿ ಬಗ್ಗೆ ಆತ್ಮಾವಲೋಕನ ಸ್ಪಷ್ಟೀಕರಣ ಸಭೆಯಲ್ಲೇ ಸದರಿ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ರಾಕೇಶ್ ಟಿಕಾಯತ್, ಯುಧ್ವೀರ್ ಮೇಲೆ ಮಸಿಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿದ್ದ ರಾಕೇಶ್ ಟಿಕಾಯತ್ ಮತ್ತು ಯುಧವೀರ್, ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ರಾಜ್ಯದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಮಾಧ್ಯಮಗೋಷ್ಠಿಯಲ್ಲಿ ಕೆಲವರು ವಾಗ್ವಾದಕ್ಕಿಳಿದಿದ್ದು, ಕಪ್ಪು ಮಸಿ ಎರಚಿದ್ದಲ್ಲದೆ. ಕುರ್ಚಿಗಳನ್ನು ಮನಬಂದಂತೆ ಎಸೆದ ಘಟನೆಯೂ ನಡೆಯಿತು.

ಘಟನೆ ಸಂಬಂಧ ಮೂವರನ್ನು ಹೈಗ್ರೌಂಡ್​​ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಹಿಂದಿನ ಲೇಖನಅರಮನೆ ಮುಂಭಾಗ ಪ್ರಧಾನಿ ಮೋದಿ ಅವರ ಯೋಗ ಕಾರ್ಯಕ್ರಮ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಮುಂದಿನ ಲೇಖನಮೂಲ ಸೌಕರ್ಯ ಕೊರತೆ: ಮುಂದಿನ ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರ ನಿರ್ಧಾರ