ಮನೆ ರಾಜಕೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಾ ರಾಮಯ್ಯ ನೇಮಕ

ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಾ ರಾಮಯ್ಯ ನೇಮಕ

0

ಬೆಂಗಳೂರು(Bengaluru): ಯುವ ಕಾಂಗ್ರೆಸ್ ಮುಖಂಡ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿ ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್‌ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಪ್ರತಿಕ್ರಿಯಿಸಿ, ಭಾರತೀಯ ಯುವ ಕಾಂಗ್ರೆಸ್ ಗೆ ತಾವು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಡ್ತಿ ನೀಡಲು ಸಂತಸವಾಗುತ್ತಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಈ ನೇಮಕಾತಿ ಮಾಡಲಾಗಿದೆ ಎಂದು ಹೇಳಿದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ರಕ್ಷಾ ರಾಮಯ್ಯ, ‘ಪಕ್ಷ ನೀಡಿರುವ ಜವಾಬ್ದಾರಿಯನ್ನು ವಿನಮ್ರವಾಗಿ ಸ್ವೀಕರಿಸಿ ರಾಷ್ಟ್ರಮಟ್ಟದಲ್ಲಿ ಪಕ್ಷದ ಬಲವರ್ಧನೆಗೆ ಶಕ್ತಿ ಮೀರಿ ಕೆಲಸ ಮಾಡುತ್ತೇನೆ. ರಾಷ್ಟ್ಟಮಟ್ಟದಲ್ಲಿ ಯುವ ಕಾಂಗ್ರೆಸ್ ಮತ್ತು ಯುವ ಸಮೂಹದ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ಹಿಂದಿನ ಲೇಖನಕರಾಮುವಿ ಕುಲಪತಿಯ ಅಧಿಕಾರಾವಧಿ ವಿಸ್ತರಣೆ: ಸರ್ಕಾರಕ್ಕೆ  ಹೈಕೋರ್ಟ್ ಪ್ರಶ್ನೆ
ಮುಂದಿನ ಲೇಖನಆಯುಷ್ಮಾನ್ ಭಾರತ್ ಯೋಜನೆಯಿಂದ 10 ಕೋಟಿ ಜನರಿಗೆ ಲಾಭ: ಸಚಿವ ಕೆ.ಗೋಪಾಲಯ್ಯ