ಹೈದರಾಬಾದ್: ಇತ್ತೀಚೆಗಷ್ಟೇ 11ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದ ರಾಮ್ ಚರಣ್ ಹಾಗೂ ಉಪಾಸನಾ ಕುಟುಂಬಕ್ಕೆ ಹೊಸ ಸದಸ್ಯೆಯ ಆಗಮನವಾಗಿದ್ದು, ರಾಮ್ ಚರಣ್ ಪತ್ನಿ ಉಪಾಸನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಈ ವಿಚಾರದಿಂದಾಗಿ ಮೆಗಾಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಸಂತಸ ಮನೆ ಮಾಡಿದ್ದು, ಇವರ ಅಭಿಮಾನಿಗಳು ಖುಷಿಯಲ್ಲಿ ಸಂಭ್ರಮಿಸಿದ್ದಾರೆ.
ಉಪಾಸನಾ ಅವರನ್ನು ಸೋಮವಾರ (ಜೂನ್ 19) ರಾತ್ರಿ ಹೈದರಾಬಾದ್ನ ಜುಬ್ಲಿ ಹಿಲ್ಸ್ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಮುಂಜಾನೆ ಉಪಾಸನಾಗೆ ಮಗು ಜನಿಸಿದ ವಿಚಾರವನ್ನು ಆಸ್ಪತ್ರೆಯವರು ಖಚಿತಪಡಿಸಿದ್ದಾರೆ.
ರಾಮ್ ಚರಣ್ ಮತ್ತು ಉಪಾಸನಾ ಅವರು 2012ರ ಜೂನ್ 14ರಂದು ಮದುವೆ ಆದರು. ಮದುವೆ ಆಗಿ ದಶಕಗಳ ಬಳಿಕ ಅವರು ಮೊದಲ ಮಗು ಪಡೆಯಲು ನಿರ್ಧರಿಸಿದ್ದರು. ಈಗ ಈ ದಂಪತಿಗೆ ಹೆಣ್ಣು ಮಗು ಜನಿಸಿದ್ದು ಅಭಿಮಾನಿಗಳಿಗೆ ಖುಷಿ ನೀಡಿದೆ. ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳ ಕಡೆಯಿಂದ ಇವರಿಗೆ ಶುಭಾಶಯ ಬರುತ್ತಿದೆ.















