ಮನೆ ರಾಜಕೀಯ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಕೋಟಿ ಕೋಟಿ ರಾಮಭಕ್ತರ ಆಸೆ ಈಡೇರಿಕೆ- ಬಿ.ವೈ ವಿಜಯೇಂದ್ರ

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಕೋಟಿ ಕೋಟಿ ರಾಮಭಕ್ತರ ಆಸೆ ಈಡೇರಿಕೆ- ಬಿ.ವೈ ವಿಜಯೇಂದ್ರ

0

ಬೆಂಗಳೂರು:  ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾಪನೆ, ರಾಮಮಂದಿರ ಉದ್ಘಾಟನೆಯಾಗಿದ್ದು, ಈ ಮೂಲಕ ಕೋಟಿ ಕೋಟಿ ರಾಮಭಕ್ತರ ಆಸೆ ಇಂದು ಈಡೇರಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಈ ಕುರಿತು  ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ. ಅಸಾಧಾರಣ ಮತ್ತು ಭಾವನಾತ್ಮಕ ಕ್ಷಣವಾಗಿದೆ.  ಅಯೋಧ್ಯೆ ಮತ್ತು ಕನ್ನಡಿಗರಿಗೆ ಅವಿನಾಭಾವ ಸಂಬಂಧವಿದೆ. ಪ್ರತಿಯೊಬ್ಬ ಕನ್ನಡಿಗರೂ ಇಂದು ಹೆಮ್ಮೆ ಪಡುತ್ತಿದ್ದಾರೆ. ದೇಶದ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ರಾಮಲಲಾನ ಪ್ರಾಣ ಪ್ರತಿಷ್ಠೆ ಕಾರ್ಯ ನೆರವೇರಿದ್ದು ನಮ್ಮೆಲ್ಲರ ಸೌಭಾಗ್ಯ ಎಂದರು.

ಪ್ರತಿಯೊಬ್ಬ ಹಿಂದೂಗಳನ್ನು ಒಂದುಗೂಡಿಸುವ ಪವಿತ್ರ ಘಳಿಗೆಗೆ ಸಾಕ್ಷಿಯಾಗಿದೆ. ಅಯೋಧ್ಯೆ, ಪ್ರಭು ಶ್ರೀರಾಮಚಂದ್ರನ ಜನ್ಮಸ್ಥಳ. ಪ್ರಭು ಶ್ರೀರಾಮಚಂದ್ರನ ಪರಮ ಭಕ್ತ ಹನುಮನ ಜನ್ಮಸ್ಥಳ ಕಿಷ್ಕಿಂಧೆ ಕರ್ನಾಟಕದಲ್ಲಿದೆ ಬಾಲರಾಮನ ವಿಗ್ರಹಕ್ಕೆ ಶಿಲೆ ಕೂಡ ಕರ್ನಾಟಕದಿಂದ ಲಭಿಸಿದೆ. ಅದರ ಶಿಲ್ಪಿಗಳು ಕನ್ನಡನಾಡಿನವರು ಎಂದು ಬಿವೈ ವಿಜಯೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದರು.

ಹಿಂದಿನ ಲೇಖನಕೋವಿಡ್ ​ಗಿಂತ 20 ಪಟ್ಟು ಮಾರಕವಾಗಿರಲಿದೆ ಡಿಸೀಸ್ ಎಕ್ಸ್​: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ
ಮುಂದಿನ ಲೇಖನರಾಮಮಂದಿರ ಸ್ಥಾಪಿಸುವ ಮೂಲಕ ಶ್ರೀರಾಮನ ಕೃಪೆಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ: ಪ್ರಹ್ಲಾದ ಜೋಶಿ