ಮನೆ ಅಪರಾಧ ರಾಮನಗರ: ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ ಯುವಕನ ಬಂಧನ

ರಾಮನಗರ: ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ ಯುವಕನ ಬಂಧನ

0

ರಾಮನಗರ: ಪ್ರೀತಿ ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸುಮಂತ್ ಎಂದು ಗುರುತಿಸಲಾಗಿದೆ.

ಸುಮಂತ್​ ಕಾರ್​ ಮೆಕಾನಿಕ್​ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಆತ ತಮ್ಮ ಗ್ಯಾರೇಜ್​ ಬಳಿ ಇರುವ ಬಾಲಕಿಯನ್ನು ಪ್ರೀತಿಸುತ್ತಿದ್ದ. ಪ್ರತಿನಿತ್ಯ ಬಾಲಕಿ ಕಾಲೇಜ್​’ಗೆ ಹೋಗುವ ದಾರಿ ಮಧ್ಯ ಅಡ್ಡ ಹಾಕಿ ಪ್ರೀತಿಸುವಂತೆ ಸುಮಂತ್​ ಪೀಡಿಸುತ್ತಿದ್ದನು. ಬಾಲಕಿ ಇವನ ಪ್ರೀತಿಯನ್ನು ನಿರಾಕರಿಸಿದ್ದಾಳೆ.  ಕಳೆದ ದಿನ ರಾತ್ರಿ 8-9 ಗಂಟೆ ಸುಮಾರು ಕನಕಪುರ ತಾಲೂಕಿನ ಬೈಪಾಸ್ ರಸ್ತೆ ನಾರಾಯಣಪ್ಪ ಕೆರೆ ಬಳಿ ಬಾಲಕಿಯನ್ನು ಅಡ್ಡಗಟ್ಟಿ ಪ್ರೀತಿಸುವಂತೆ ಪೀಡಿಸಿದ್ದಾನೆ. ಬಾಲಕಿ ಸಹ ಅವನ ಪ್ರೀತಿಯನ್ನು ನಿರಾಕರಿಸಿದ್ದಾಳೆ. ಈ ವೇಳೆ ಸುಮಂತ್ ಆ್ಯಸಿಡ್​ ಅವಳ ಮುಖದ ಮೇಲೆ ಎರಚಿ ಪರಾರಿಯಾಗಿದ್ದಾನೆ.

ಆ್ಯಸಿಡ್​ ದಾಳಿಯಿಂದ ನರಳಾಡುತ್ತಿದ್ದ ಬಾಲಕಿಯನ್ನು ಸ್ಥಳೀಯ ಜನ ಕೂಡಲೇ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.

ಆ್ಯಸಿಡ್ ದಾಳಿಯಿಂದ ಬಾಲಕಿಯ ಎಡ ಕಣ್ಣಿಗೆ ತೀವ್ರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ಮುಂದುವರಿದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿ ಸುಮಂತ್​ನನ್ನು ಬಂಧಿಸಿದರು.

ಸ್ಥಳಕ್ಕೆ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ಬಾಲಕಿಯ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಕನಕಪುರ ಟೌನ್ ಪೊಲೀಸ್​ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ  ಹೆಣ್ಣಾನೆ ರಕ್ಷಣೆ: ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ಕೆ ಮೋದಿ ಮೆಚ್ಚುಗೆ
ಮುಂದಿನ ಲೇಖನಮಡಿಕೇರಿ: ಹಳೆಯ ಶೌಚ ಗುಂಡಿಗೆ ಬಿದ್ದು ಕಾಡಾನೆ ಸಾವು