ಮನೆ ಅಪರಾಧ ರಾಮನಗರ: ಬಿಜೆಪಿ ಪರ ಮತಯಾಚನೆ ಮಾಡಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

ರಾಮನಗರ: ಬಿಜೆಪಿ ಪರ ಮತಯಾಚನೆ ಮಾಡಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

0

ರಾಮನಗರ: ಲೋಕಸಭೆ ಚುನಾವಣೆಗೆ ಬಿಜೆಪಿ ಪರ ಮತಯಾಚನೆ ಮಾಡಿದ್ದಕ್ಕೆ ರಾಮನಗರ ಜಿಲ್ಲೆ ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗಿರಿಗೌಡನ ದೊಡ್ಡಿಯಲ್ಲಿ ಮಹಾದೇವ್ (32) ಎಂಬುವರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

Join Our Whatsapp Group

ಬಿಜೆಪಿ ಪರ ಮತಯಾಚನೆ ಮಾಡಿದ್ದಕ್ಕೆ ಮಹಾದೇವ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಅವರ ಕುಟುಂಬದವರು ಆರೋಪಿಸಿದ್ದಾರೆ.

ಶುಕ್ರವಾರ ರಾತ್ರಿ ಮಹಾದೇವ್ ಅವರನ್ನು ಗುಂಪೊಂದು ಥಳಿಸುತ್ತಿರುವ ವಿಡಿಯೋ ಮೊಬೈಲ್ ​​ನಲ್ಲಿ ಸೆರೆಯಾಗಿದೆ. ಸ್ಥಳೀಯ ಪಂಚಾಯ್ತಿ ಮುಖಂಡರು ಥಳಿಸಿದ್ದಾರೆ ಎಂದು ಆರೋಪ ಮಾಡಲಾಗಿದೆ.

ಈ ಮಧ್ಯೆ ರೌಡಿ ಚಟುವಟಿಕೆ ಮಾಡುತ್ತಿದ್ದುದಕ್ಕೆ ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಇನ್ನು ಕೆಲವು ದೂರಿದ್ದಾರೆ.

ಸದ್ಯ ಮಹಾದೇವ್ ​ರನ್ನು ಹಾರೋಹಳ್ಳಿಯ ದಯಾನಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಹಿಂದಿನ ಲೇಖನಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಶ್ರೀ ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
ಮುಂದಿನ ಲೇಖನನೇಹಾ ಕೊಲೆಗೆ  ಸಿಎಂ ತೀವ್ರ  ಖಂಡನೆ: ಕೊಲೆಗಾರನಿಗೆ ಉಗ್ರ ಶಿಕ್ಷೆ