ರಾಮನಗರ: ಇಲ್ಲಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ.
ಹಾರೋಹಳ್ಳಿ ಸಮೀಪದ ದಯಾನಂದ ಸಾಗರ್ ಆಸ್ಪತ್ರೆಯ ಶೌಚ ಗುಂಡಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಆಗ ತಾನೆ ಜನಿಸಿರುವ ಮಗುವನ್ನು ದುರುಳರು ಟಾಯ್ಲೆಟ್ ಕಮೋಡ್ ಗೆ ಹಾಕಿದ್ದಾರೆ.
ಶೌಚಾಲಯ ಕಟ್ಟಿಕೊಂಡ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ವೇಳೆ ಶೌಚಗುಂಡಿಯಲ್ಲಿ ಮಗು ಶವ ಪತ್ತೆಯಾಗಿದೆ. ಮಗು ಜನನ ಮರೆಮಾಚಲು ಈ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.
ಈ ಸಂಬಂಧ ಆಸ್ಪತ್ರೆ ವೈದ್ಯರು ಹಾರೋಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಮಗುವಿನ ಡಿಎನ್ಎ ವರದಿ ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
Saval TV on YouTube