ಮನೆ ಕಾನೂನು ರಮೇಶ್‌ ಜಾರಕಿಹೊಳಿ ಸಿ ಡಿ ಪ್ರಕರಣ: ಲಿಖಿತ ವಾದ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿಂದ...

ರಮೇಶ್‌ ಜಾರಕಿಹೊಳಿ ಸಿ ಡಿ ಪ್ರಕರಣ: ಲಿಖಿತ ವಾದ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿಂದ ಕೊನೆಯ ಅವಕಾಶ

0

ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸಿ ಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ ಐಟಿ) ರಚನೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಲಿಖಿತ ವಾದಾಂಶ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಕೊನೆಯದಾಗಿ ಎರಡು ವಾರ ಕಾಲಾವಕಾಶ ನೀಡಿದೆ.

ಎಸ್‌ ಐಟಿ ರಚನೆಯ ಸಿಂಧುತ್ವ ಪ್ರಶ್ನಿಸಿ ಸಂತ್ರಸ್ತೆ ಹಾಗೂ ಇತರರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಸರ್ಕಾರದ ಪರ ವಕೀಲರು ಹಾಜರಾಗಿ, ಲಿಖಿತ ವಾದಾಂಶ ಮತ್ತು ಪ್ರಕರಣ ವಿವರಗಳನ್ನು ಸಂಕ್ಷಿಪ್ತ ರೂಪದಲ್ಲಿ ಸಲ್ಲಿಸಲು ಕಾಲಾವಕಾಶ ನೀಡುವಂತೆ ಕೋರಿದರು. ಇದಕ್ಕೆ ಆಕ್ಷೇಪಿಸಿದ ಪೀಠವು ಈಗಾಗಲೇ ಸಾಕಷ್ಟು ಸಮಯ ನೀಡಲಾಗಿದೆ. ಆದರೂ ಲಿಖಿತ ವಾದಾಂಶ ಸಲ್ಲಿಸಲು ವಿಳಂಬ ಮಾಡಲಾಗುತ್ತಿದೆ ಎಂದಿತು.

ನಂತರ ಸರ್ಕಾರಿ ವಕೀಲರ ಮನವಿ ಮೇರೆಗೆ ಲಿಖಿತ ವಾದಾಂಶ ಮತ್ತು ಪ್ರಕರಣ ವಿವರವನ್ನು ಸಂಕ್ಷಿಪ್ತ ರೂಪದಲ್ಲಿ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಿ ವಿಚಾರಣೆಯನ್ನು ಡಿಸೆಂಬರ್‌ 15ಕ್ಕೆ ಮುಂದೂಡಿದೆ.

ಹಿಂದಿನ ಲೇಖನಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆ ಶಾಲೆಗೆ ನ್ಯಾಯಾಧೀಶರ ಭೇಟಿ: ಮುಖ್ಯ ಶಿಕ್ಷರಿಗೆ ತರಾಟೆ
ಮುಂದಿನ ಲೇಖನಶಿವಮೊಗ್ಗ: ಪ್ರಿ ವೆಡ್ಡಿಂಗ್ ಫೋಟೋಶೂಟ್  ವೇಳೆ ಆನೆಯ ಮೇಲಿಂದ ಕೆಳಗೆ ಬಿದ್ದ ಮಾವುತ