ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು ಸೋಮವಾರ ಚಾರ್ಜ್ಶೀಟ್ ಸಲ್ಲಿಸಲಿದೆ ಎಂದು ವರದಿಗಳು ತಿಳಿಸಿವೆ. ಬೆಂಗಳೂರಿನ ವಿಶೇಷ ಎನ್‌ಐಎ ನ್ಯಾಯಾಲಯದಲ್ಲಿ ಚಾರ್ಜ್ಶೀಟ್ ಸಲ್ಲಿಸಲಾಗುವುದು.
ಸ್ಫೋಟದ ಪಿತೂರಿಯನ್ನು ವಿದೇಶದಿಂದ ಆಯೋಜಿಸಲಾಗಿದೆ ಎಂದು ಮೂಲಗಳು ಬಹಿರಂಗಪಡಿಸಿವೆ. ಸಂಚಿನಲ್ಲಿ ಭಾಗಿಯಾಗಿರುವ ಐದು ವ್ಯಕ್ತಿಗಳ ವಿರುದ್ಧ ಎನ್‌ಐಎ ಆರೋಪಗಳನ್ನು ದಾಖಲಿಸುವ ನಿರೀಕ್ಷೆಯಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾ ಮತ್ತು ಮಾರ್ಚ್ ೧ ರಂದು ಕೆಫೆಯಲ್ಲಿ ಬಾಂಬ್ ಇರಿಸಿದ ಮುಸ್ಸಾವಿರ್ ಹುಸೇನ್ ಶಾಜಿಬ್ ಅವನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಕೋಲ್ಕತ್ತಾ ಬಳಿಯ ಅಡಗುತಾಣದಿಂದ ಬಂಧಿಸಿದೆ.
ಕರ್ನಲ್ ಎಂಬ ಸಂಕೇತನಾಮದಿಂದ ಕರೆಯಲ್ಪಡುವ ಸ್ಫೋಟದ ಹ್ಯಾಂಡ್ಲರ್ನೊಂದಿಗೆ ತಹವಾಸ್ ನೇರ ಸಂಪರ್ಕದಲ್ಲಿದ್ದನು ಎಂದು ಎನ್‌ಐಎ ತನಿಖೆಯಿಂದ ತಿಳಿದುಬಂದಿದೆ.