ಮನೆ ಕಾನೂನು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ: ನಾಲ್ವರು ಶಂಕಿತರು ವಶಕ್ಕೆ

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ: ನಾಲ್ವರು ಶಂಕಿತರು ವಶಕ್ಕೆ

0

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಾಲ್ವರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.ಗುಪ್ತಚರ ಇಲಾಖೆ ಅಧಿಕಾರಿಗಳು ನಾಲ್ವರ ವಿಚಾರಣೆ ನಡೆಸುತ್ತಿದ್ದಾರೆ.

ಅಬ್ದುಲ್​ ಕಲಾಂ ಅವರ ಸ್ಪೂರ್ತಿಯಿಂದ ತೆರೆದಂತಹ ರಾಮೇಶ್ವರಂ ಕೆಫೆ, ಭಾರತದಾದ್ಯಂತ ಬ್ರಾಂಚ್ ​ಗಳನ್ನ ಹೊಂದಿದೆ. ರಾಮೇಶ್ವರಂ ಕೆಫೆ ದೇಗುಲದ ಕಾನ್ಸೆಪ್ಟ್​ ನಲ್ಲಿ ನಿರ್ಮಾಣವಾಗಿದೆ. ಬೆಂಗಳೂರಿನಲ್ಲೂ ಹಲವು ಬ್ರಾಂಚ್​ ಗಳಿದ್ದು, ಜನ ಸಾಮಾನ್ಯರ ಜೊತೆಗೆ ಐಟಿ ಸಿಬ್ಬಂದಿಯ ಹಾಟ್​ ಫೇವರೆಟ್ ಕೂಡ ಆಗಿದೆ. ಈ ಕೆಫೆಯಲ್ಲಿ ನಿನ್ನೆ(ಮಾರ್ಚ್ 01) ಮಧ್ಯಾಹ್ನ ಊಟದ ಸಮಯಕ್ಕೆ ಸರಿಯಾಗಿ ಬಾಂಬ್ ಬ್ಲಾಸ್ಟ್ ಆಗಿದೆ.

ಪ್ರಕರಣ ಸಂಬಂಧ ಸದ್ಯ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಪೊಲೀಸ್ ಅಧಿಕಾರಿಗಳ ಸಭೆ ಕರೆದ ಸಿಎಂ

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಪೊಲೀಸ್​ ಮಹಾ ನಿರ್ದೇಶಕ ಅಲೋಕ್​ ಮೋಹನ್​, ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿ ಹಲವರು ಭಾಗಿಯಾಗಿದ್ದಾರೆ.  

ಸ್ಥಳದಲ್ಲಿ ಬಾಂಬ್ ಸ್ಯಾಂಪಲ್‌ ಗಳನ್ನು ಸಂಗ್ರಹ ಮಾಡಲಾಗಿದೆ. ಸದ್ಯಕ್ಕೆ ಯಾವುದೇ ಮಾಹಿತಿ ಬಂದಿಲ್ಲ.

ಹಿಂದಿನ ಲೇಖನಪಾಕ್ ಪರ ಘೋಷಣೆ ಪ್ರಕರಣ: FSL ವರದಿ ಬಹಿರಂಗ- ಆರೋಪಿ ಬಂಧನಕ್ಕೆ ತಯಾರಿ
ಮುಂದಿನ ಲೇಖನಕೋಟ: ಖಾಸಗಿ ಬಾರ್‌ ಸೇರಿದಂತೆ ವಿವಿಧ ಕಡೆ ಸರಣಿ ಕಳ್ಳತನ