ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಬಳ್ಳಾರಿಯಲ್ಲಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಕೆಫೆ ಬಾಂಬರ್ ತುಮಕೂರು ಮೂಲಕ ಬಳ್ಳಾರಿ ಬಸ್ ನಿಲ್ದಾಣಕ್ಕೆ ಬಂದಿದ್ದಾನೆಂಬ ಮಾಹಿತಿ ಹಿನ್ನೆಲೆಯಲ್ಲಿ ಎನ್ ಐಎ ಅಧಿಕಾರಿಗಳು ಶೋಧಕಾರ್ಯ ನಡೆಸಿದ್ದಾರೆ.
ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಎನ್ ಐಎ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಬಂಧಿತನಾಗಿ ಜೈಲಿನಲ್ಲಿರುವ ಸುಲೇಮಾನ್ ಎಂಬಾತನನ್ನು ಅಧಿಕಾರಿಗಳು ಬಾಡಿ ವಾರಂಟ್ ಮೂಲಕ ತಮ್ಮ ವಶಕ್ಕೆ ಪಡೆದಿದ್ದಾರೆ.
ಕಳೆದ ಡಿಸೆಂಬರ್ 18 ರಂದು ನಿಷೇಧಿತ ಪಿಎಫ್ ಐ ಸಂಘಟನೆ ನಂಟು ಹೊಂದಿದ್ದ ಸುಲೇಮಾನ್ ನನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಆತ ಬಳ್ಳಾರಿ ಕಾರಾಗೃಹದಲ್ಲಿದ್ದು, ಇದೀಗ ಬೆಂಗಳೂರು ರಾಮೇಶ್ವರಿ ಕೆಫೆ ಬಾಂಬ್ ಬ್ಲಾಸ್ಟ್ ಗೆ ಸಂಬಂಧಿಸಿ ಪುನಃ ಸುಲೇಮಾನ್ ನನ್ನು ವಶಕ್ಕೆ ಪಡೆಯಲಾಗಿದೆ. ಬಾಂಬ್ ಬ್ಲಾಸ್ಟ್ ಗೆ ಸಂಬಂಧಿಸಿದಂತೆ ಶೋಧಕಾರ್ಯ ತೀವ್ರಗೊಂಡಿದೆ