ರಾಮನಗರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2024-25ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಜಿಲ್ಲಾ ಕಚೇರಿಗೆ ಮಾಧ್ಯಮ ಚಟುವಟಿಕೆಗಳ ಕಾರ್ಯಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ನಿರ್ವಹಣೆ ಬಗ್ಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ 12 ತಿಂಗಳ ಅವಧಿಯ ಅಪ್ರೆಂಟಿಸ್ ಶಿಪ್ ತರಬೇತಿ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತರು ಪತ್ರಿಕೋದ್ಯಮದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಅ. 30 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಗೆ ದ್ವಿ-ಪ್ರತಿಯಲ್ಲಿ ಸಲ್ಲಿಸಬೇಕು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಂ. 101, ನೆಲಮಹಡಿ, ನೂತನ ಜಿಲ್ಲಾ ಸಂಕೀರ್ಣ, ಮಾರುತಿ ನಗರ, ರಾಮನಗರ. ಈ ಕಚೇರಿಯನ್ನು ಸಂಪರ್ಕಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.