ಮನೆ ರಾಜ್ಯ ರಾಮನಗರ: ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಬೊಮ್ಮಾಯಿ ಭೇಟಿ

ರಾಮನಗರ: ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಬೊಮ್ಮಾಯಿ ಭೇಟಿ

0

ರಾಮನಗರ(Ramnagar): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ರಾಮನಗರ ಜಿಲ್ಲೆಯ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ರಾಮನಗರದ ಮಾರುತಿ ಬಡಾವಣೆಯಲ್ಲಿ ಭಕ್ಷಿ ಕೆರೆ ಒಡೆದು ಅಪಾರ ಪ್ರಮಾಣದ ಬೆಳೆ ಹಾನಿಯಾಗಿರುವುದನ್ನು  ಗಮನಿಸಿದರು.

ನಂತರ ಸುಮಾರು ಅರ್ಧ ಕಿ.ಮೀ. ಮುಖ್ಯಮಂತ್ರಿಗಳು ರೈಲ್ವೆ ಟ್ರ್ಯಾಕ್ ಮೇಲೆ ಕಾಲ್ನಡಿಗೆಯಲ್ಲಿ ಹೋದರು. ಭಕ್ಷಿ ಕೆರೆ ಒಡೆದಿರುವ ಜಾಗದಿಂದ ರೈತರ ಮನೆಗೆ ಭೇಟಿ ಕೊಟ್ಟು ಪರಿಹಾರ ನೀಡುವ ಭರವಸೆ ನೀಡಿದರು.

ಬಿದ್ದಿರುವ ಮನೆಗಳಿಗೆ ತಕ್ಷಣ 1 ಲಕ್ಷ ರೂ. ಹಾಗೂ ಒಟ್ಟಾರೆ 5 ಲಕ್ಷ ರೂ. ಪರಿಹಾರವನ್ನು ಹಂತ ಹಂತವಾಗಿ ನೀಡಲಾಗುವುದು ಎಂದು ತಿಳಿಸಿದರು.

ಭಕ್ಷಿ ಕೆರೆಯನ್ನು ದುರಸ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಂದಾಯ ಸಚಿವ ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸಂಸದ ಡಿ.ಕೆ. ಸುರೇಶ, ಶಾಸಕಿ ಅನಿತಾ ಕುಮಾರಸ್ವಾಮಿ ಉಪಸ್ಥಿತರಿದ್ದರು.

ಹಿಂದಿನ ಲೇಖನಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2 ರಷ್ಟು ಮೀಸಲಾತಿ: ಸಿಎಂ ಬೊಮ್ಮಾಯಿ
ಮುಂದಿನ ಲೇಖನಶಿವಾಜಿ ಸುರತ್ಕಲ್ ಸಿನಿಮಾದ ಮೇಘನಾ ಗಾಂವ್ಕರ್ ಲುಕ್ ರಿವೀಲ್