ಮನೆ ಕಾನೂನು ರಾಮ್‌ಪುರಹತ್ ಹತ್ಯಾಕಾಂಡ: ಇಂದು ಕೋಲ್ಕತ್ತಾ ಹೈಕೋರ್ಟ್ ನಲ್ಲಿ ವಿಚಾರಣೆ

ರಾಮ್‌ಪುರಹತ್ ಹತ್ಯಾಕಾಂಡ: ಇಂದು ಕೋಲ್ಕತ್ತಾ ಹೈಕೋರ್ಟ್ ನಲ್ಲಿ ವಿಚಾರಣೆ

0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ರಾಮ್‌ಪುರಹತ್‌ನಲ್ಲಿ ನಡೆದಿರುವ 8 ಜನರ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಗುರವಾರ ಕೋಲ್ಕತ್ತಾ ಹೈಕೋರ್ಟ್ ನಲ್ಲಿ ಸುಮೋಟೋ ಪ್ರಕರಣದ ವಿಚಾರಣೆ ನಡೆಯಲಿದೆ.

ಬುಧವಾರ ವಕೀಲ ಅನಿಂದ್ಯಾ ಕುಮಾರ್ ದಾಸ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಜೊತೆಗೆ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ನೇತೃತ್ವದ ವಿಭಾಗೀಯ ಪೀಠ, ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ನಡೆಸಿತು.

ಇದೇ ವೇಳೆ ರಾಮ್‌ಪುರಹತ್‌ನಲ್ಲಿ ನಡೆದ ಹತ್ಯಾಕಾಂಡದ ಬಗ್ಗೆ ಪಿಐಎಲ್ ಸಲ್ಲಿಸಿದ್ದ ವಕೀಲ ಅನಿಂದ್ಯಾ ಕುಮಾರ್ ದಾಸ್ ಕೇಂದ್ರೀಯ ತನಿಖಾ ತಂಡ(ಸಿಬಿಐ) ಅಥವಾ ರಾಷ್ಟ್ರೀಯ ತನಿಖಾ ತಂಡ(ಎನ್ಐಎ) ತನಿಖೆ ನಡೆಸುವಂತೆ ಒತ್ತಾಯಿಸಿದ್ದರು.

ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ರಾಮ್‌ಪುರಹತ್ ಬ್ಲಾಕ್ 1ರ ಅಡಿಯಲ್ಲಿ ಬರೀಶಾಲ್ ಗ್ರಾಮ ಪಂಚಾಯತ್‌ನ ಉಪ ಪ್ರಧಾನ (ಟಿಎಂಸಿ) ಬದು ಶೇಖ್ ಮೇಲೆ ನಾಲ್ವರು ದುಷ್ಕರ್ಮಿಗಳು ಕಚ್ಚಾಬಾಂಬ್ ಎಸೆದು ಹತ್ಯೆ ಮಾಡಿದರು ಎಂದು ಹೇಳಲಾಗುತ್ತಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೇಖ್ ಅನ್ನು ರಾಮ್‌ಪುರಹತ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಅಂತಿಮವಾಗಿ ಶೇಖ್ ಮೃತದೇಹವನ್ನು ಬೊಗ್ಟುಯಿ ಗ್ರಾಮಕ್ಕೆ ತೆಗೆದುಕೊಂಡು ಹೋಗಲಾಯಿತು. ಇನ್ನು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡರು.

ರಾಮ್‌ಪುರಹತ್‌ನಲ್ಲಿ ಮಂಗಳವಾರ ಮುಂಜಾನೆ ಎಂಟು ಜನರು ತಮ್ಮ ಮನೆಗೆ ಬೆಂಕಿ ಹಚ್ಚಲಾಗಿದ್ದು, ಮನೆಯಲ್ಲಿದ್ದ ಹತ್ತು ಜನರ ಪೈಕಿ ಏಳು ಮಂದಿ ಮನೆಯಲ್ಲಿಯೇ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದರಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೇ ಪ್ರಾಣ ಬಿಟ್ಟಿದ್ದರು.