ಮನೆ ಅಪರಾಧ ರಾಣೆಬೆನ್ನೂರು ಶಹರ ಪೊಲೀಸ್ ಠಾಣೆ ಪಿಎಸ್ ಐ, ಪೇದೆ ಲೋಕಾಯುಕ್ತ ಬಲೆಗೆ

ರಾಣೆಬೆನ್ನೂರು ಶಹರ ಪೊಲೀಸ್ ಠಾಣೆ ಪಿಎಸ್ ಐ, ಪೇದೆ ಲೋಕಾಯುಕ್ತ ಬಲೆಗೆ

0

ಹಾವೇರಿ: ರಾಣೆಬೆನ್ನೂರು ಶಹರ ಪೊಲೀಸ್ ಠಾಣೆ ಪಿಎಸ್ ಐ ಮತ್ತು ಪೇದೆ 40 ಸಾವಿರ ರೂ. ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಶಹರ ಠಾಣೆ ಪಿಎಸ್ ಐ ಸುನೀಲ ತೇಲಿ ಮತ್ತು ಈತನ ವಾಹನದ ಚಾಲಕ ಸಚೀನ ಲೋಕಾಯುಕ್ತ ಬಲೆಗೆ ಬಿದ್ದ ಆರೋಪಿಗಳು.

ವ್ಯಕ್ತಿಯೊಬ್ಬರಿಂದ ಮನೆ ಬಾಡಿಗೆ ವಸೂಲಿ ಮಾಡಿಸಿಕೊಡುವ ವಿಚಾರಕ್ಕೆ 50 ಸಾವಿರ ರೂ. ಬೇಡಿಕೆ ಇಟ್ಟಿದ್ದರು.

ವ್ಯಕ್ತಿಯೊಬ್ಬರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಮೇರೆಗೆ ದಾವಣಗೆರೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯ ಆರೋಪಿ ಸ್ಥಾನದಲ್ಲಿರುವ ಪೊಲೀಸರು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.