ಮುಂಬೈ (Mumbai): ಸಾಮಾಜಿಕ ಮಾಧ್ಯಮದಲ್ಲಿ ನಗ್ನ ಫೋಟೋಗಳನ್ನು ಹಂಚಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.22 ರಂದು ವಿಚಾರಣೆಗೆ ಹಾಜರಾಗುವಂತೆ ನಟ ರಣವೀರ್ ಸಿಂಗ್ ಗೆ ಮುಂಬೈ ಪೊಲೀಸರು ನೋಟಿಸ್ ನೀಡಿದ್ದಾರೆ.
ಮಂಬೈ ಮೂಲದ ಸರ್ಕಾರೇತರ ಸಂಸ್ಥೆಯೊಂದು (ಎನ್‌ಜಿಒ) ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ನಗ್ನ ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಮಹಿಳೆಯರ ಭಾವನೆಗಳಿಗೆ ರಣವೀರ್ ಸಿಂಗ್ ಧಕ್ಕೆ ತಂದಿದ್ದಾರೆ ಎಂದು ಎನ್‌ಜಿಒ ಆರೋಪಿಸಿದೆ.
ರಣವೀರ್ ಸಿಂಗ್ ಇತ್ತೀಚೆಗೆ ನಿಯತಕಾಲಿಕೆಯೊಂದರ ಫೋಟೊ ಶೂಟ್‌ಗೆ ಬೆತ್ತಲೆಯಾಗಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ತಮ್ಮ ನಗ್ನ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿಯೂ ಪ್ರಕಟಿಸಿದ್ದರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು.