ಬಾಂದಾ(Banda): ತಂದೆಯಿಂದಲೇ ಅತ್ಯಾಚಾರಕ್ಕೊಳಗಾದ 18 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಾಂದಾದ ಮರ್ಕಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗುರುವಾರ ರಾತ್ರಿ ಆರೋಪಿ ತಂದೆ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಎಸ್ಪಿ ಲಕ್ಷ್ಮಿ ಮಿಶ್ರಾ ತಿಳಿಸಿದ್ದಾರೆ.
ಶುಕ್ರವಾರ ಸಂಸ್ತಸ್ತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಬಳಿಕ ಆರೋಪಿಯನ್ನು ಬಂಧಿಸಲಾಗಿದೆ ಮತ್ತು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.