ಮನೆ ಕಾನೂನು ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು

0

ಮಂಗಳೂರು(Mangaluru): 70 ವರ್ಷದ ತಂದೆಯೇ ಮಗಳ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾಗಿದ್ದು, ಅಪರಾಧಿಗೆ 20 ವರ್ಷ ಕಠಿಣ ಸಜೆ ಮತ್ತು  25 ಸಾವಿರ ರೂ ದಂಡ ವಿಧಿಸಿ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.

ಪ್ರಕರಣದ ಸಾಕ್ಷ್ಯಧಾರಗಳನ್ನು ಪರಿಗಣಿಸಿ ನ್ಯಾಯಾಧೀಶರಾದ ಕೆ. ಎಂ. ರಾಧಕೃಷ್ಣ ಅವರು ಈ ಆದೇಶ ಪ್ರಕಟಿಸಿದ್ದಾರೆ.

2020ನೇ ಮಾರ್ಚ್ ತಿಂಗಳಿನಲ್ಲಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು. ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಟಿ.ಡಿ. ನಾಗರಾಜ್ ಪ್ರಕರಣದ ತನಿಖೆ ನಡೆಸಿ, ಆರೋಪಿಯ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.

ಸರ್ಕಾರಿ ವಕೀಲ ವೆಂಕಟರಮಣ ಸ್ವಾಮಿ ಸರ್ಕಾರದ ಪರವಾಗಿ ವಾದಿಸಿದ್ದರು.