Saval TV on YouTube
ಕೊಪ್ಪಳ(Koppala): ತಾಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮೈಲಪ್ಪ ಜ್ಯಾಳಾರ ಬಂಧಿತ ಆರೋಪಿ.
ಎಎಸ್’ಐ ಡಿ ಕೆ ನಾಯಕ್ ಈ ಕುರಿತು ಮಾಹಿತಿ ನೀಡಿದ್ದು, ಕಳೆದ ಆರು ತಿಂಗಳ ಹಿಂದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿಯನ್ನು ಮರುಳುಮಾಡಿ ಅತ್ಯಾಚಾರ ಎಸಗಿದ್ದಾನೆ. ಜೊತೆಗೆ ಅತ್ಯಾಚಾರ ಮಾಡಿರುವುದನ್ನು ವಿಡಿಯೋ ಮಾಡಿಟ್ಟುಕೊಂಡಿದ್ದು, ಈ ಕುರಿತು ಯಾರಿಗಾದರೂ ತಿಳಿಸಿದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ.
ಹೀಗಾಗಿ, ಬಾಲಕಿ ಈ ಕುರಿತು ಪೋಷಕರಿಗೆ ವಿಷಯ ತಿಳಿಸಿಲ್ಲ. ಗುರುವಾರ ಅಪ್ರಾಪ್ತೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಗರ್ಭಿಣಿ ಆಗಿರುವುದು ಬೆಳಕಿಗೆ ಬಂದಿದೆ. ಬಳಿಕ ಬಾಲಕಿಯ ಪಾಲಕರು ನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪೋಕ್ಸೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.