ಬೀದರ್: ತಂದೆಯಿಂದಲೇ ಸ್ವಂತ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿರುವ ಪೈಶಾಚಿಕ ಕೃತ್ಯ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ಮನೆಯಲ್ಲಿ ಎಲ್ಲರು ನಿದ್ರೆಗೆ ಜಾರಿದಾಗ ಅತ್ಯಾಚಾರ ಎಸಗುತ್ತಿದ್ದ. ಈಗ ಬಾಲಕಿಯ ಅಜ್ಜಿಯ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಕಳೆದ ಒಂದು ವರ್ಷದಿಂದ 1 ವರ್ಷದಿಂದ ಅತ್ಯಾಚಾರ ನಡೆಸುತ್ತಿದ್ದ. ಈ ವಿಚಾರ ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಹೆದರಿಸುತ್ತಿದ್ದ ಎಂದು ತಿಳಿದುಬಂದಿದೆ.
ಈ ಬಗ್ಗೆ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಅಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.