ಮನೆ ಸುದ್ದಿ ಜಾಲ ಅರಣ್ಯ ಇಲಾಖೆಗೆ ರಶ್ಮಿ ಆಯ್ಕೆ

ಅರಣ್ಯ ಇಲಾಖೆಗೆ ರಶ್ಮಿ ಆಯ್ಕೆ

0

ಮೈಸೂರು (Mysuru): 2022ನೇ ಸಾಲಿನಲ್ಲಿ ನಡೆದ ಕೇಂದ್ರ ಲೋಕಸೇವಾ ಆಯೋಗದ ಲಿಖಿತ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ಭಾರತೀಯ ಅರಣ್ಯ ಸೇವೆಯ ಅಧಿಕಾರಿಯಾಗಿ ನಗರದ ರಶ್ಮಿ ಜಿ. ಆಯ್ಕೆಯಾಗಿದ್ದಾರೆ.

ಭಾರತೀಯ ಅರಣ್ಯ ಸೇವೆಗೆ ದೇಶದಲ್ಲಿ 64 ನೇ ರ್ಯಾಂಕ್ ಪಡೆಯುವುದರೊಂದಿಗೆ ಆಯ್ಕೆ ಆಗಿ ಮೈಸೂರಿಗೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಜೆ.ಸಿ ಎಂಜಿನೀಯರಿಂಗ್ ಕಾಲೇಜಿನಲ್ಲಿ ಸಿವಿಲ್ ಪದವಿಯನ್ನು ಪ್ರಥಮ ರ್ಯಾಂಕ್ ನೊಂದಿಗೆ ಪಾಸಾದ ರಶ್ಮಿ ಅವರು, 2017ನೇ ಸಾಲಿನಲ್ಲಿ ಕೆಎಎಸ್ ಪರೀಕ್ಷೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಯಾಗಿ ಆಯ್ಕೆಯಾದರು. ಸದ್ಯ ಬೆಂಗಳೂರಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಅವರ ತಂದೆ ಗಂಗಾರಾಂ ಲೇಖಕ ಹಾಗೂ ನಿವೃತ್ತ ಪ್ರಾಂಶುಪಾಲರು. ತಾಯಿ ರತ್ನಮ್ಮ ಮುಖ್ಯ ಶಿಕ್ಷಕಿಯಾಗಿದ್ದಾರೆ.

ಹಿಂದಿನ ಲೇಖನಇಂದಿನ ರಾಶಿ ಭವಿಷ್ಯ
ಮುಂದಿನ ಲೇಖನಸಿದ್ದರಾಮೋತ್ಸವ ಆಚರಣೆ ತಪ್ಪಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌