ಮನೆ ಮನರಂಜನೆ ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ..!

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ..!

0

ಹೈದರಾಬಾದ್‌ : ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್‌ ದೇವರಕೊಂಡ ನಿಶ್ಚಿತಾರ್ಥ ಮಾಡಿಕೊಂಡಿದ್ದು ಫೆಬ್ರವರಿಯಲ್ಲಿ ಮದುವೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಟಾಲಿವುಡ್‌ನ ವಿಶ್ವಾಸಾರ್ಹ ಮೂಲಗಳಿಂದ ಬಂದಿರುವ ವರದಿಗಳ ಪ್ರಕಾರ, ಪ್ರೇಮ ಪಕ್ಷಿಗಳಾದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಇಂದು ರಹಸ್ಯವಾಗಿ ಹೈದರಾಬಾದ್‌ನ ದೇವರಕೊಂಡ ಮನೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.‌

ವಿಜಯ್ ಮತ್ತು ರಶ್ಮಿಕಾ ಇಬ್ಬರೂ ಬಹಳ ಸಮಯದಿಂದ ಪರಸ್ಪರ ಭೇಟಿಯಾಗುತ್ತಿದ್ದಾರೆ. ವಿದೇಶ ಪ್ರವಾಸದಲ್ಲೂ ಇಬ್ಬರು ಜೊತೆಯಾಗಿರುವ ಫೋಟೋಗಳು ಲಭ್ಯವಾಗಿದ್ದರೂ ಅಧಿಕೃತವಾಗಿ ನಾವಿಬ್ಬರು ಪ್ರೀತಿಸುತ್ತಿದ್ದೇವೆ ಎಂದು ಎಲ್ಲಿಯೂ ಹೇಳಿಕೊಂಡಿರಲಿಲ್ಲ.

ನಿಶ್ಚಿತಾರ್ಥವು ಇಬ್ಬರೂ ತಾರೆಯರ ಆಪ್ತ ಸ್ನೇಹಿತರು ಮತ್ತು ಎರಡು ಕುಟುಂಬಗಳ ಸಮ್ಮುಖದಲ್ಲಿ ಬಹಳ ಖಾಸಗಿಯಾಗಿ ನಡೆದಿದೆ. ವಿಜಯ್‌ ಮತ್ತು ರಶ್ಮಿಕಾ ಶೀಘ್ರವೇ ಈ ಸುದ್ದಿಯನ್ನು ಅಧಿಕೃತಗೊಳಿಸಲಿದ್ದಾರೆ ಎಂದು ವರದಿಯಾಗಿದೆ.