ರಾಮನಗರ : ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹೋಮ್ ಸ್ಟೇ ಒಂದರಲ್ಲಿ ರೇವ್ ಪಾರ್ಟಿ ನಡೆದ ಆರೋಪ ಕೇಳಿಬಂದಿದೆ.
ರೇವ್ ಪಾರ್ಟಿ ನಡೆಯುತ್ತಿದ್ದಾಗಲೇ ಕಗ್ಗಲೀಪುರ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ 130ಕ್ಕೂ ಹೆಚ್ಚು ಯುವಕ, ಯುವತಿಯರನ್ನು ಬಂಧಿಸಲಾಗಿದೆ. ಬಂಧಿತರೆಲ್ಲರೂ ಬೆಂಗಳೂರು ಮೂಲದವರು ಎನ್ನಲಾಗಿದೆ. ಸುಮಾರು ಮಧ್ಯರಾತ್ರಿ 3ಗಂಟೆಗೆ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಪಾರ್ಟಿಯಲ್ಲಿ ಮಾದಕ ವಸ್ತುಗಳ ಬಳಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಬಂಧಿತ ಆರೋಪಿಗಳಿಗೆ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಾಗಿದೆ. ಹೋಮ್ ಸ್ಟೇ, ಸುಹಾಸ್ ಗೌಡ ಎಂಬುವವರಿಗೆ ಸೇರಿದ್ದು ಎಂದು ತನಿಖೆಯಲ್ಲಿ ತಿಳಿದು ಬಂದಿದೆ.















