ಮನೆ ರಾಷ್ಟ್ರೀಯ ರೆಪೋ ದರ ಶೇ. 6.25ಕ್ಕೆ ಇಳಿಸಿದ ಆರ್​ಬಿಐ

ರೆಪೋ ದರ ಶೇ. 6.25ಕ್ಕೆ ಇಳಿಸಿದ ಆರ್​ಬಿಐ

0

ನವದೆಹಲಿ: ನಿರೀಕ್ಷೆಯಂತೆ ಭಾರತೀಯ ರಿಸರ್ವ್ ಬ್ಯಾಂಕ್​ನ ಮಾನಿಟರಿ ಪಾಲಿಸಿ ಕಮಿಟಿ ರಿಪೋದರವನ್ನು 0.25 ಪ್ರತಿಶತದಷ್ಟು ಇಳಿಕೆ ಮಾಡುವ ನಿರ್ಧಾರ ಕೈಗೊಂಡಿದೆ.

Join Our Whatsapp Group

ಎಂಪಿಸಿ ಸಭೆಯ ಬಳಿಕ ಇಂದು ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಶೇ. 6.50ರಷ್ಟಿದ್ದ ಬಡ್ಡಿದರವನ್ನು ಶೇ. 6.25ಕ್ಕೆ ಇಳಿಸಲಾಗಿದೆ. ಹತ್ತಿರ ಹತ್ತಿರ ಐದು ವರ್ಷಗಳ ಬಳಿಕ ಮೊದಲ ಬಾರಿಗೆ ಆರ್​ಬಿಐನ ರಿಪೋ ದರ ಇಳಿಕೆ ಆಗಿದೆ.

ಈ ಬಾರಿ 25 ಮೂಲಾಂಕಗಳಷ್ಟು ಇಳಿಕೆ ಆಗುತ್ತದೆ ಎಂದು ಬಹುತೇಕ ಆರ್ಥಿಕ ತಜ್ಞರು ನಿರೀಕ್ಷಿಸಿದ್ದರು. ಎಂಪಿಸಿಯಲ್ಲಿರುವ ಎಲ್ಲಾ ಆರು ಸದಸ್ಯರು ಸರ್ವಾನುಮತದಿಂದ 25 ಮೂಲಾಂಕಗಳಷ್ಟು ಬಡ್ಡಿದರ ಇಳಿಸಲು ನಿರ್ಧರಿಸಿದ್ದಾರೆ. ಹಣದುಬ್ಬರ ನಿಯಂತ್ರಣಕ್ಕೆ ಬರುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಹಣಕಾಸು ನೀತಿ ಸಮಿತಿಯು ರಿಪೋ ದರ ಇಳಿಸುವ ರಿಸ್ಕ್ ತೆಗೆದುಕೊಂಡಿದೆ. ಈ ರಿಪೋ ದರ ಇಳಿಕೆಯಿಂದ ಬ್ಯಾಂಕುಗಳ ಸಾಲದರಗಳು ಕಡಿಮೆಗೊಳ್ಳುವ ಸಾಧ್ಯತೆ ಇದೆ.