ಮುಂಬೈ(Mumbai): ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ರೆಪೊ ದರವನ್ನು ಮತ್ತೆ ಶೇ 0.50ರಷ್ಟು ಹೆಚ್ಚಿಸಿರುವುದಾಗಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಮಾಹಿತಿ ನೀಡಿದ್ದಾರೆ.
ಹಣದುಬ್ಬರ ತಡೆಯುವುದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರ್‌ಬಿಐ ಹೇಳಿದೆ.
ಈ ಬಾರಿಯ ಹೆಚ್ಚಳದೊಂದಿಗೆ ರೆಪೊ ದರ ಈಗ ಶೇ 5.9 ಆಗಿದೆ. ಈ ಹಿಂದೆ ಆಗಸ್ಟ್ 5ರಂದು ರೆಪೊ ದರವನ್ನು ಶೇಕಡ 0.50ರಷ್ಟು ಹೆಚ್ಚಿಸಲಾಗಿತ್ತು.
ಆರ್‌ಬಿಐ23ನೇ ಹಣಕಾಸು ವರ್ಷದ ಜಿಡಿಪಿ ಬೆಳವಣಿಗೆ ದರ ಶೇ 7ರಷ್ಟು ಇರಲಿದೆ ಎಂದು ಆರ್‌ಬಿಐ ಅಂದಾಜಿಸಿದೆ. ಗ್ರಾಹಕ ದರ ಸೂಚ್ಯಂಕ ಆಧಾರಿತ (ಸಿಪಿಐ) ಹಣದುಬ್ಬರ ಶೇ 6.7ರಷ್ಟು ಇರಲಿದೆ ಎಂದು ಆರ್‌ಬಿಐ ಹೇಳಿದೆ.