ಬೆಂಗಳೂರು: ಐಪಿಎಲ್ 2025ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಮೊದಲ ಬಾರಿಗೆ ಕಪ್ ಗೆದ್ದು ಸಂಭ್ರಮಿಸುತ್ತಿದ್ದು, ಈ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತದಿಂದ 11 ಜನ ಸಾವನ್ನಪ್ಪಿದ್ದಾರೆ. ಇದರ ಬೆನ್ನಲ್ಲೇ ಜನರ ನಿಯಂತ್ರಣಕ್ಕೆ ನಮ್ಮ ಮೆಟ್ರೋ ಎರಡು ನಿಲ್ದಾಣಗಳಲ್ಲಿ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಈ ಘಟನೆ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ತಕ್ಷಣ ಕ್ರಮ ಕೈಗೊಂಡಿದ್ದು, ಕಬ್ಬನ್ ಪಾರ್ಕ್ ಮತ್ತು ವಿಧಾನಸೌಧ ಮೆಟ್ರೋ ನಿಲ್ದಾಣಗಳಲ್ಲಿ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. “ಅತೀವ ಜನಸಂದಣಿಯಿಂದಾಗಿ ಜನರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ನಿಯಂತ್ರಣ ಮತ್ತೆ ಸಾಧಾರಣ ಸ್ಥಿತಿಗೆ ಬಂದ ನಂತರ ಸೇವೆ ಪುನರಾರಂಭಿಸಲಾಗುವುದು” ಎಂದು ತಿಳಿಸಲಾಗಿದೆ.














