ಮನೆ ಕ್ರೀಡೆ RCB vs GT: ಗುಜರಾತ್ ಟೈಟನ್ಸ್ ಪಂದ್ಯಕ್ಕೆ ಆರ್ ಸಿಬಿ ಸಂಭಾವ್ಯ ಪ್ಲೇಯಿಂಗ್ XI ಇಂತಿದೆ

RCB vs GT: ಗುಜರಾತ್ ಟೈಟನ್ಸ್ ಪಂದ್ಯಕ್ಕೆ ಆರ್ ಸಿಬಿ ಸಂಭಾವ್ಯ ಪ್ಲೇಯಿಂಗ್ XI ಇಂತಿದೆ

0

ಬೆಂಗಳೂರು: ಹದಿನಾರನೇ ಆವೃತ್ತಿಯ ಪ್ಲೇಆಫ್ ಗೇರುವ ತವಕದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಳೆದೆರಡು ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ (112 ರನ್) ಹಾಗೂ ಸನ್ ರೈಸರ್ಸ್ ಹೈದರಾಬಾದ್ (8 ವಿಕೆಟ್) ವಿರುದ್ಧ ಅಭೂತಪೂರ್ವ ಗೆಲುವು ಸಾಧಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಭಾನುವಾರ (ಮೇ 21) ತವರು ಅಂಗಣ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಟೂರ್ನಿಯ 70ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಸವಾಲು ಎದುರಿಸಲಿದೆ.

Join Our Whatsapp Group

ಆರ್ ಸಿಬಿ ಆಡಿರುವ 13 ಪಂದ್ಯಗಳಿಂದ 7ರಲ್ಲಿ ಗೆಲುವು ಸಾಧಿಸಿ 12(+0.180) ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್ ನಲ್ಲಿ 4ನೇ ಸ್ಥಾನದಲ್ಲಿದ್ದು, ಜಿಟಿ ವಿರುದ್ಧ ಗೆದ್ದರೆ ನೇರವಾಗಿ ಐಪಿಎಲ್ ಪ್ಲೇಆಫ್ ಗೆ ಅರ್ಹತೆ ಪಡೆಯಲಿದೆ. ಇದಕ್ಕೂ ಮುನ್ನ ಡಬಲ್ ಹೆಡರ್ ನ ಮೊದಲನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೋತರೆ, ಆರ್ ಸಿಬಿ ಪಂದ್ಯ ಆಡುವ ಮುನ್ನವೇ ನಾಕ್ ಔಟ್ ಹಂತಕ್ಕೆ ತಲುಪಬಹುದು. ಆದರೆ, ಕಡಿಮೆ ಅಂತರದಲ್ಲಿ ಸೋತು ರನ್ ರೇಟ್ ಉಳಿಸಿಕೊಳ್ಳಬೇಕಷ್ಟೆ.

ಮತ್ತೊಂದೆಡೆ ಈಗಾಗಲೇ ಕ್ವಾಲಿಫೈಯರ್ ಒಂದಕ್ಕೆ ಅರ್ಹತೆ ಗಿಟ್ಟಿಸಿರುವ ಹಾರ್ದಿಕ್ ಪಾಂಡ್ಯ ಸಾರಥ್ಯದ ಗುಜರಾತ್ ಟೈಟನ್ಸ್, ಆರ್ ಸಿಬಿ ವಿರುದ್ಧ ಸೋತರೂ 18 ಅಂಕಗಳೊಂದಿಗೆ ಅಗ್ರ ಸ್ಥಾನವನ್ನು ಉಳಿಸಿಕೊಳ್ಳಲಿದೆ. ಅಂತಿಮ ಪಂದ್ಯಕ್ಕೆ ಪ್ಲೇಯಿಂಗ್ XIನಲ್ಲಿ ಹಲವು ಬದಲಾವಣೆ ಮಾಡಿಕೊಳ್ಳಬಹುದು.

ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು’ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ಮೈಕಲ್ ಬ್ರೇಸ್ವೆಲ್, ಕರಣ್ ಶರ್ಮಾ, ಮೊಹಮ್ಮದ್ ಸಿರಾಜ್, ವೇಯ್ನ್ ಪಾರ್ನೆಲ್.

ಗುಜರಾತ್ ಟೈಟನ್ಸ್: ಶುಭಮನ್ ಗಿಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ದಸೂನ್ ಶಾನಕ, ರಾಹುಲ್ ತೆವಾಟಿಯ, ಮೋಹಿತ್ ಶರ್ಮಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್.

ಪಂದ್ಯದ ವಿವರ

ಐಪಿಎಲ್ 2023, ಪಂದ್ಯ 70

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟನ್ಸ್

ದಿನಾಂಕ: ಮೇ 21, 2023

ಪಂದ್ಯ ಆರಂಭ: ಸಂಜೆ 7.30ಕ್ಕೆ

ಸ್ಥಳ: ಎಂ ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು

ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್

ಲೈವ್ ಸ್ಟ್ರೀಮಿಂಗ್: ಜಿಯೋ ಸಿನಿಮಾ

ಬೆಂಗಳೂರು ಪಿಚ್ ವರದಿ

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣವು ಬ್ಯಾಟಿಂಗ್ ಪಿಚ್ ಆಗಿದ್ದು, ಹೈ- ಸ್ಕೋರಿಂಗ್ ನಿರೀಕ್ಷೆ ಮಾಡಬಹುದು. ಮೊದಲು ಬ್ಯಾಟ್ ಮಾಡಿದ ತಂಡ 210 ರಿಂದ 220 ರನ್ ಕಲೆ ಹಾಕಿದರೆ ಎದುರಾಳಿ ತಂಡದ ಮೇಲೆ ಒತ್ತಡ ಏರಬಹುದು. ಟಾಸ್ ಗೆದ್ದ ನಾಯಕ ಬೌಲಿಂಗ್ ಆಯ್ಕೆ ಮಾಡಿದರೆ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚಿದೆ. ಈ ಪಿಚ್ನಲ್ಲಿ ಇದುವರೆಗೂ 85 ಐಪಿಎಲ್ ಪಂದ್ಯಗಳು ಆಡಿದ್ದು, 36 ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ಜಯಿಸಿದ್ದರೆ, 46 ಬಾರಿ ಚೇಸಿಂಗ್ ತಂಡಗಳು ಗೆಲುವು ಪಡೆದಿವೆ.

ಹಿಂದಿನ ಲೇಖನಕರ್ನಾಟಕ: ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ: ಹಂಗಾಮಿ ಸಭಾಧ್ಯಕ್ಷರಾಗಿ ಆರ್ ವಿ ದೇಶಪಾಂಡೆ
ಮುಂದಿನ ಲೇಖನಮಹಿಳೆಯರ ಬ್ಯಾಂಕ್ ಖಾತೆಗೆ 2 ಸಾವಿರ ಗ್ಯಾರಂಟಿ: ಗೃಹ ಲಕ್ಷ್ಮೀ ಯೋಜನೆ ಜಾರಿಗೆ ಅಧಿಕೃತ ಆದೇಶ