ಮನೆ ರಾಜಕೀಯ ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕ: ಸಚಿವ ಶ್ರೀರಾಮುಲು

ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕ: ಸಚಿವ ಶ್ರೀರಾಮುಲು

0

ಬೆಂಗಳೂರು: ವಜಾಗೊಂಡಿದ್ದ ಸಾರಿಗೆ ನೌಕರರನ್ನು ಮರು ನೇಮಕ ಮಾಡಿಕೊಳ್ಳಲು ಅವಕಾಶವಿಲ್ಲದಿದ್ದರೂ, ಮಾನವೀಯತೆ ದೃಷ್ಠಿಯಿಂದ ಮರು ನೇಮಕ ಮಾಡಿಕೊಳ್ಳಲು ಆದೇಶ ನೀಡಲಾಗುತ್ತಿದೆ ಎಂದುಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ಮೊದಲ ಹಂತದಲ್ಲಿ 100 ಜನರಿಗೆ ನೇಮಕ ಮಾಡಲಾಗುತ್ತಿದೆ. ಉಳಿದವರಿಗೆ ಹಂತ ಹಂತವಾಗಿ ಮರು ನೇಮಕ ಮಾಡಲಾಗುತ್ತಿದೆ. ಈ ತಿಂಗಳ ಒಳಗೆ 700 ಮಂದಿಗೆ ನೇಮಕಾತಿ ನೀಡಲಾಗುವುದು ಎಂದ ಅವರು,  ಸರ್ಕಾರದ ವಿರುದ್ಧ ಪ್ರತಿಭಟನೆ ಮುಷ್ಕರ ಮಾಡಿದರೆ ನಿಮ್ಮನ್ನು ರಕ್ಷಣೆ ಮಾಡುವುದು ಕಷ್ಟ ಎಂಬ ಎಚ್ಚರಿಕೆಯನ್ನು ನೀಡಿದರು.
ನೌಕರರು ಮುಷ್ಕರ ನಡೆಸಲು ಬೇಡ ಎನ್ನುವುದಿಲ್ಲ. ಆದರೆ, ಮುಷ್ಕರ ನಡೆಸುವ ಮೊದಲು ಸಂಬಂಧ ಪಟ್ಟ ಸಚಿವರು, ಸಿಎಂ ಜೊತೆ ಚರ್ಚಿಸಬೇಕು. ಸರ್ಕಾರದ ಬಗ್ಗೆ ನಿಮಗೆ ಗೌರವ ಇರಬೇಕು. ಇನ್ನು ಮುಂದೆ ಪ್ರತಿ ತಿಂಗಳು ಸಂಬಳ ದೊರೆಯುವಂತೆ ನೋಡಿಕೊಳ್ಳಲಾಗುವುದು. ಈಗ ನೇಮಕಗೊಂಡವರು ಇನ್ನು ಮುಂದೆ ಮುಷ್ಕರಕ್ಕೆ ಹೋಗಬಾರದು ಎಂದು ಷರತ್ತು ವಿಧಿಸಲಾಗಿದೆ. ನೌಕರರು ಮುಷ್ಕರಕ್ಕೆ ಹೋದರೆ ನೌಕರಿ ಕಳೆದುಕೊಳ್ಳಬೇಕಾಗುತ್ತದೆ.
ಮುಖ್ಯಮಂತ್ರಿ ಬೊಮ್ಮಾಯಿ ನೌಕರರ ಪರವಾಗಿದ್ದಾರೆ. ಕ್ರಿಮಿನಲ್ ಕೇಸ್ ದಾಖಲಾದವರನ್ನು ನೇಮಕ ಮಾಡಿಕೊಳ್ಳಲಾಗುವುದಿಲ್ಲ. ಎಲೆಕ್ಟ್ರಿಕ್ ಬಸ್ ಬಂದರೂ ನಿಗಮದ ಡ್ರೈವರ್ ಗಳನ್ನು ಕೈ ಬಿಡುವುದಿಲ್ಲ. ಎಷ್ಟೇ ಎಲೆಕ್ಟ್ರಿಕ್ ಬಸ್ ಬಂದರೂ ಇರುವ ಡ್ರೈವರ್ ಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಮಾರ್ಗಸೂಚಿ ಪ್ರಕಾರ ಎಲೆಕ್ಟ್ರಿಕ್ ಬಸ್ ಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಜನರು ಬಿಎಂಟಿಸಿ ಯಲ್ಲಿ ಸಂಚಾರ ಮಾಡುತ್ತಿಲ್ಲ. ಈಗ ಬಿಎಂಟಿಸಿ ದರ ಹೆಚ್ಚಳ ಮಾಡುವ ಪ್ರಸ್ತಾಪ ಇಲ್ಲ ಎಂದರು..

ಹಿಂದಿನ ಲೇಖನಹಿಜಾಬ್ ವಿವಾದದ ಹಿಂದೆ ಪಿಎಫ್ ಐ, ಎಸ್ ಡಿಪಿಐ ಕೈವಾಡ: ಬಿಜೆಪಿ ವಕ್ತಾರ ಎಂ.ಎ.ಮೋಹನ್ ಆರೋಪ
ಮುಂದಿನ ಲೇಖನಕನ್ನಡಿಗ, ವೇಗಿ ಪ್ರಸಿದ್ಧ ಕೃಷ್ಣ ಪ್ರದರ್ಶನಕ್ಕೆ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಶ್ಲಾಘನೆ