ಮನೆ ರಾಜಕೀಯ ನಮ್ಮ ಷರತ್ತು ಒಪ್ಪಿಕೊಳ್ಳುವ ಪಕ್ಷದೊಂದಿಗೆ ಮೈತ್ರಿಗೆ ಸಿದ್ದ: ಹೆಚ್.ಡಿ.ಕುಮಾರಸ್ವಾಮಿ

ನಮ್ಮ ಷರತ್ತು ಒಪ್ಪಿಕೊಳ್ಳುವ ಪಕ್ಷದೊಂದಿಗೆ ಮೈತ್ರಿಗೆ ಸಿದ್ದ: ಹೆಚ್.ಡಿ.ಕುಮಾರಸ್ವಾಮಿ

0

ಬೆಂಗಳೂರು: ಕೆಲವು ಮತದಾನೋತ್ತರ ಸಮೀಕ್ಷೆಗಳು ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಬಹುದು ಎಂದು ಅಂದಾಜಿಸಿದ ಹಿನ್ನಲೆಯಲ್ಲಿ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ, ತಮ್ಮ ಷರತ್ತನ್ನು ಒಪ್ಪಿಕೊಳ್ಳುವ ಯಾವುದೇ ಪಕ್ಷಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.

Join Our Whatsapp Group

ಈ ಬಾರಿ ಯಾವುದೇ ಪಕ್ಷಕ್ಕೂ ಬಹುಮತ ಬರುವುದಿಲ್ಲ ಎಂದು 10 ಸಂಸ್ಥೆಗಳು ಪ್ರಕಟಿಸಿರುವ ಮತದಾನೋತ್ತರ ಸಮೀಕ್ಷೆಯಲ್ಲಿ ಹೇಳಿವೆ.

ಸಿಂಗಾಪುರಕ್ಕೆ ತೆರಳುವುದಕ್ಕೂ ಮುನ್ನ ಮಾತನಾಡಿದ ಅವರು, 50 ಸೀಟುಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸ ಇದೆ. ಈ ಬಾರಿ ನಮ್ಮ ಷರತ್ತುಗಳನ್ನು ಒಪ್ಪಿಕೊಳ್ಳುವ ಪಕ್ಷದ ಜತೆ ಹೋಗುತ್ತೇವೆ ಎಂದು ಹೇಳಿದರು

ಕುಮಾರಸ್ವಾಮಿ ಈಗಾಗಲೇ 2006ರಲ್ಲಿ ಬಿಜೆಪಿ ಹಾಗೂ 2018ರಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡು ಮುಖ್ಯಮಂತ್ರಿಯಾಗಿದ್ದರು. ಹೀಗಾಗಿ ಷರತ್ತುಗಳನ್ನು ಒಪ್ಪಿಕೊಂಡರೆ ಮಾತ್ರ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

2018ರಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಸರ್ಕಾರ ರಚನೆ ಮಾಡಿದಾಗ ಇದ್ದ ಹಾಗೆ ಸಮನ್ವಯ ಸಮಿತಿ ಈ ಬಾರಿ ಇರಬಾರದು. ಜೆಡಿಎಸ್’ನ ಗಟ್ಟಿ ನೆಲೆಗಳಾದ ಮಂಡ್ಯ ಹಾಗೂ ಹಾಸನ ಜಿಲ್ಲೆಗಳಿಂದ ದೂರ ಸರಿಯಬೇಕು. ಚರ್ಚೆ ಮಾಡದೆ ಯಾವುದೇ ವೈಚಾರಿಕ ನಿರ್ಧಾರಗಳನ್ನು ತೆಗೆದುಕೊಳ್ಳುವಂತಿಲ್ಲ ಎಂದು ತಮ್ಮ ಷರತ್ತುಗಳ ಪಟ್ಟಿಯನ್ನು ಕುಮಾರಸ್ವಾಮಿ ಮುಂದಿಟ್ಟಿದ್ದಾರೆ.

ಸರ್ಕಾರ ನಡೆಸಲು ಮುಖ್ಯಮಂತ್ರಿಗೆ ಮುಕ್ತ ಅವಕಾಶ ನೀಡಬೇಕು. ನೀರಾವರಿ, ಇಂಧನ ಹಾಗೂ ಲೋಕೋಪಯೋಗಿ ಖಾತೆಗಳು ತಮಗೆ ನೀಡಬೇಕು ಎಂದು ಷರತ್ತು ವಿಧಿಸಿದ್ದಾರೆ.

ಜೆಡಿಎಸ್ ಮೂಲಗಳ ಪ್ರಕಾರ, ವರಿಷ್ಠರಾದ ದೇವೇಗೌಡ ಅವರಿಗೆ ಬಿಜೆಪಿ ಹಾಗೂ ಕಾಂಗ್ರೆಸ್, ಎರಡೂ ಪಕ್ಷದ ನಾಯಕರೊಂದಿಗೆ ಉತ್ತಮ ಸಂಬಂಧ ಇದ್ದು, ಮೈತ್ರಿ ಸಂಬಂಧ ಅವರೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನಲಾಗಿದೆ.

ಹಿಂದಿನ ಲೇಖನವರ್ಕೌಟ್ ಮಾಡುವಾಗ ಈ ವಿಷಯಗಳನ್ನು ನಿರ್ಲಕ್ಷ್ಯಿಸದಿರಿ
ಮುಂದಿನ ಲೇಖನಐಪಿಎಲ್-2023: ಪಾಯಿಂಟ್ ಟೇಬಲ್​’ನಲ್ಲಿ ಮೇಲೇರಿದ ಆರ್​’ಸಿಬಿ