Saval TV on YouTube
ಮೈಸೂರು(Mysuru): ವಿಪಕ್ಷ ನಾಯಕ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವುದಾದರೆ ಅವರ ವಿರುದ್ಧ ಕಣಕ್ಕಿಳಿಯುವಂತೆ ಪಕ್ಷ ಸೂಚಿಸಿದರೆ ನಾನು ಸಿದ್ಧ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾನುವಾರ ಹೇಳಿದರು.
ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷ ನನಗೆ ಯಾವುದೇ ಸವಾಲು ಕೊಟ್ಟರೂ ಅದನ್ನು ನಿಭಾಯಿಸುತ್ತೇನೆ. ಪಕ್ಷದ ತೀರ್ಮಾನವೇ ಅಂತಿಮ ಎಂದರು.
ವರುಣಾ ಮಾತ್ರವಲ್ಲ ಎಲ್ಲಾ ಕ್ಷೇತ್ರಗಳಲ್ಲೂ ಸಂಘಟನೆ ಮಾಡುತ್ತಿದ್ದೇನೆ. ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಪಡೆಯಲು ಹೋರಾಡುತ್ತಿದ್ದೇವೆ, ಸಂಘಟನೆ ಬಲಪಡಿಸುತ್ತಿದ್ದೇವೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಎನ್ನುವ ಹೆಸರು ಕೇವಲ ಅಲೆ ಅಲ್ಲ; ಅದೊಂದು ಸುನಾಮಿ. ಕಾಂಗ್ರೆಸ್’ನವರಿಗೆ ಅರ್ಥವಾಗಿಲ್ಲ. ಏಕೆಂದರೆ ಆ ಪಕ್ಷದವರು ಭ್ರಮೆಯಲ್ಲಿದ್ದಾರೆ ಎಂದರು.