ಮನೆ ಸುದ್ದಿ ಜಾಲ ಉಕ್ರೇನ್ ಜೊತೆ ಮಾತುಕತೆ ನಡೆಸಲು ಸಿದ್ದ: ರಷ್ಯಾ ಅಧ್ಯಕ್ಷ

ಉಕ್ರೇನ್ ಜೊತೆ ಮಾತುಕತೆ ನಡೆಸಲು ಸಿದ್ದ: ರಷ್ಯಾ ಅಧ್ಯಕ್ಷ

0

ಮಾಸ್ಕೋ: ಉಕ್ರೇನ್‌ ಜೊತೆ ಮಾತುಕತೆ ನಡೆಸಲು ಬೆಲಾರಸ್‌ನ ರಾಜಧಾನಿ ಮಿನ್‌ಸ್ಕ್‌ಗೆ ನಿಯೋಗವನ್ನು ಕಳುಹಿಸಲು ಸಿದ್ಧವಿರುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ ಎಂದು ಕ್ರೆಮ್ಲಿನ್‌ನ (ಅಧ್ಯಕ್ಷರ ಅಧಿಕೃತ ನಿವಾಸದ) ವಕ್ತಾರ ಡಿಮಿಟ್ರಿ ಪೆಸ್ಕೋವ್‌ ಹೇಳಿದ್ದಾರೆ.

ರಕ್ಷಣಾ ಸಚಿವಾಲಯ, ವಿದೇಶಾಂಗ ಸಚಿವಾಲಯ ಮತ್ತು ಸರ್ಕಾರದ ಪ್ರತಿನಿಧಿಗಳು ನಿಯೋಗದಲ್ಲಿ ಇರಲಿದ್ದಾರೆ ಎಂದೂ ಮಾಹಿತಿ ನೀಡಿರುವ ಪೆಸ್ಕೋವ್, ಉಕ್ರೇನ್‌ನಲ್ಲಿ ಪ್ರಜಾತಂತ್ರವನ್ನು ರಕ್ಷಿಸುವುದು ರಷ್ಯಾ ಆಕ್ರಮಣದ ಉದ್ದೇಶ ಎಂದು ಪುನರುಚ್ಚರಿಸಿದ್ದಾರೆ.

ಮಿಲಿಟರಿ ಕಾರ್ಯಾಚರಣೆಗೆ ಸಂಬಂಧಿಸಿದಂತೆ ರಷ್ಯಾದೊಂದಿಗೆ ಮಾತುಕತೆ ನಡೆಸಲು ಬಯಸುತ್ತಿರುವುದಾಗಿ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ದೂರದರ್ಶನದ ಭಾಷಣದಲ್ಲಿ ಶುಕ್ರವಾರ ಹೇಳಿದ್ದರು.

ಈ ಸಂಬಂಧ ವ್ಲಾಡಿಮಿರ್ ಪುಟಿನ್, ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.ಉಕ್ರೇನ್ ಅನ್ನು ವಶಪಡಿಸಿಕೊಳ್ಳುವ ಯಾವುದೇ ಯೋಜನೆಯನ್ನು ತಮ್ಮ ದೇಶ ಹೊಂದಿಲ್ಲ. ಉಕ್ರೇನ್ ಪಡೆಗಳು ‘ಶಸ್ತ್ರಾಸ್ತ್ರಗಳನ್ನು ತ್ಯಜಿಸಿದರೆ’ ನೇರವಾಗಿ ಮಾತುಕತೆ ನಡೆಸಲು ಮಾಸ್ಕೋ ಸಿದ್ಧವಾಗಿದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್‌ ಹೇಳಿದ್ದರು.