ಮನೆ ರಾಜ್ಯ ರೆಬೆಲ್ ಸ್ಟಾರ್ ಅಂಬರೀಶ್ ಪುಣ್ಯಸ್ಮರಣೆ – ಸಮಾಧಿಗೆ ಕುಟುಂಬಸ್ಥರಿಂದ ಪೂಜೆ

ರೆಬೆಲ್ ಸ್ಟಾರ್ ಅಂಬರೀಶ್ ಪುಣ್ಯಸ್ಮರಣೆ – ಸಮಾಧಿಗೆ ಕುಟುಂಬಸ್ಥರಿಂದ ಪೂಜೆ

0

ರೆಬೆಲ್ ಸ್ಟಾರ್ ಅಂಬರೀಶ್ ಅವರ 7ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಇಂದು (ನ.24) ಕಂಠೀರವ ಸ್ಟುಡಿಯೋಗೆ ಆಗಮಿಸಿ ಅಂಬರೀಶ್ ಸಮಾಧಿಗೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಸುಮಲತಾ ಅಂಬರೀಶ್, ಮಗ ಅಭಿಷೇಕ್ ಅಂಬರೀಶ್ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ. ನಂತರ ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳು ಅನ್ನದಾನ ಹಾಗೂ ಅಖಿಲ ಭಾರತ ಡಾ.ಅಂಬರೀಶ್ ಅಭಿಮಾನಿಗಳ ಸಂಘದ ಉದ್ಘಾಟನೆ ನೆರವೇರಿಸಲಾಯ್ತು.

ಅಂಬರೀಶ್ ಅವರ 7ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಆಗಮಿಸಿ ಭಾಗಿಯಾಗಿದ್ದರು. ಹಿರಿಯ ನಟ ದೊಡ್ಡಣ್ಣ, ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಶ್ ಸಹ ಪೂಜೆಯಲ್ಲಿ ಭಾಗಿಯಾಗಿದ್ದಾರೆ.

ಈ ವೇಳೆ ಹಲವಾರು ವಿಚಾರಗಳ ಬಗ್ಗೆ ಸುಮಲತಾ ಅಂಬರೀಶ್ ಮಾತನಾಡಿದ್ದಾರೆ. ಮೊಮ್ಮಗನ ಜೊತೆ ಕಳೆದ ಸಮಯ, ಅವನ ತೊದಲು ನುಡಿ ಬಗ್ಗೆ ಹೇಳಿಕೊಂಡಿದ್ದಾರೆ. ಸಕ್ರೀಯ ರಾಜಕಾರಣದಿಂದ ಅಂತರದ ಬಗ್ಗೆ, ಉತ್ತರಿಸಿರುವ ಅವರು ಕ್ಷೇತ್ರದ ಜನರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದಿದ್ದಾರೆ.