ಮನೆ ರಾಜ್ಯ ಕುರುಬ ಸಮುದಾಯ ಎಸ್ ಟಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು

ಕುರುಬ ಸಮುದಾಯ ಎಸ್ ಟಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು

0

ಬೆಂಗಳೂರು: ರಾಜ್ಯದ ಮೂರನೇ ಅತಿದೊಡ್ಡ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸುವಂತೆ ರಾಜ್ಯ ಸರಕಾರ ಗುರುವಾರ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದೆ.

Join Our Whatsapp Group

ಮೈಸೂರಿನ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸಂಶೋಧನ ಸಂಸ್ಥೆ ಈ ಸಂಬಂಧ ಸುದೀರ್ಘ‌ ಅಧ್ಯಯನ ನಡೆಸಿ ವರದಿ ಸಲ್ಲಿಸಿತ್ತು. ಆ ವರದಿ ಆಧರಿಸಿ ಸರಕಾರ ಸಚಿವ ಸಂಪುಟದಲ್ಲಿ ಚರ್ಚಿಸಿ ಅನುಮೋದನೆ ನೀಡಿದೆ. ಇದರ ಬೆನ್ನಲ್ಲೇ ವರದಿಯಂತೆ ಕುರುಬ ಸಮುದಾಯವನ್ನು ಪ.ಪಂಗಡಗಳ ಪಟ್ಟಿಗೆ ಸೇರ್ಪಡೆಗೊಳಿಸಬೇಕೆಂದು ವರದಿಯೊಂದಿಗೆ ಕೇಂದ್ರ ಸರಕಾರದ ಪರಿಶಿಷ್ಟ ಪಂಗಡ ವ್ಯವಹಾರಗಳ ಸಚಿವಾಲಯಕ್ಕೆ ಶಿಫಾರಸು ಮಾಡಿದೆ.

ಕುರುಬ ಸಮುದಾಯಗಳ ಒತ್ತಾಯದ ಮೇರೆಗೆ 2017ರಲ್ಲಿ ಆ ಸಮುದಾಯದ ಕುಲಶಾಸ್ತ್ರ ಅಧ್ಯಯನಕ್ಕೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದರು. 2019ರಲ್ಲಿ ಕುಲಶಾಸ್ತ್ರ ಅಧ್ಯಯನಕ್ಕೆ ಹಣ ಬಿಡುಗಡೆ ಮಾಡುವುದರೊಂದಿಗೆ ಪರಿಶಿಷ್ಟ ಪಂಗಡಗಳ ಸಂಶೋಧನ ಸಂಸ್ಥೆಗೆ ವಹಿಸಲಾಗಿತ್ತು. ಇದು 2023ರ ಮಾರ್ಚ್‌ ನಲ್ಲಿ ಅಧ್ಯಯನ ನಡೆಸಿ ವರದಿ ಸಲ್ಲಿಸಿತ್ತು.