ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲು ಪ್ರಮಾಣ ಹೆಚ್ಚಿಸಿ ಈಗಾಗಲೇ ತೆಗೆದು ಕೊಂಡ ನಿರ್ಣಯವನ್ನು ಸಂವಿಧಾನದ ಷೆಡ್ಯೂಲ್ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಇವೆರಡೂ ವರ್ಗಗಳಿಗೆ ಉದ್ಯೋಗ ಮತ್ತು ಶಿಕ್ಷಣ ದಲ್ಲಿ ಒಟ್ಟು ಮೀಸಲಾತಿ ಪ್ರಮಾಣವನ್ನು ಪ.ಜಾತಿಗೆ ಶೇ 15 ರಿಂದ ಶೇ 17, ಪ.ವರ್ಗಕ್ಕೆ ಶೇ 3 ರಿಂದ ಶೇ 7ರಷ್ಟು ಹೆಚ್ಚಳವಾಗಲಿದೆ.
ಇದಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗಿತ್ತು, ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದರು.