ಕಲಬುರಗಿ: ಸಹಾಯಕ ಪ್ರಾಧ್ಯಾಪಕ ಹುದ್ದೆಯ ನೇಮಕಾತಿ ಪರೀಕ್ಷೆಯನ್ನು ಕಲಬುರಗಿಯಿಂದ ಬೆಂಗಳೂರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಥಳಾಂತರ ಮಾಡಿದೆ.
ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ ಕಲಬುರಗಿಯ ಬದಲು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕೆಇಎ ತಿಳಿಸಿದೆ.
ಕಲಬುರಗಿ ಮಾತ್ರವಲ್ಲದೆ, ವಿಜಯಪುರ ಜಿಲ್ಲೆಯಲ್ಲಿ ನಡೆಯಬೇಕಿರುವ ಪರೀಕ್ಷೆಗಳನ್ನೂ ಸ್ಥಳಾಂತರಿಸಲಾಗಿದೆ.
ಕಲಬುರಗಿಯಲ್ಲಿ ನಡೆಯಬೇಕಿರುವ ಪರೀಕ್ಷೆಗಳು ಬೆಂಗಳೂರಿಗೆ ಸ್ಥಳಾಂತರವಾದರೆ, ವಿಜಯಪುರದಿಂದ ತುಮಕೂರಿಗೆ ಸ್ಥಳಾಂತರ ಮಾಡಲಾಗಿದೆ.
ಡಿಸೆಂಬರ್ 31 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಜನವರಿ 13 ಕ್ಕೆ ಮುಂದೂಡಲಾಗಿದೆ. ಕೆ-ಸೆಟ್‌ಗೆ ಕಲ್ಯಾಣ ಕರ್ನಾಟಕ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದಾರೆ.